Breaking News

ಡಬಲ್ ಎಂಟ್ರಿ ಹೊರತುಪಡಿಸಿ ಬೇರೆ ಫಾರಂ 7 ಅರ್ಜಿ ಪರಿಗಣಿಸದಂತೆ ಸೂಚನೆ: ಡಿಕೆಶಿ

Spread the love

ಬೆಂಗಳೂರು: ಡಬಲ್ ಎಂಟ್ರಿ ಹೊರತುಪಡಿಸಿ ಬೇರೆ ಫಾರಂ 7 ಅರ್ಜಿ ಪರಿಗಣಿಸದಂತೆ ರಾಜ್ಯ ಚುನಾವಣಾ ಆಯೋಗ  ಸೂಚನೆ ನೀಡಿದೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.

ಚುನಾವಣಾ ಆಯೋಗದ ತೀರ್ಮಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮರಣ ಹಾಗೂ ಎರಡು ಬಾರಿ ನೋಂದಣಿ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಯಾವುದೇ ಫಾರಂ 7 ಅನ್ನು ಅನುಮೋದನೆ ಮಾಡುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತರು ರಾಜ್ಯದ ಎಲ್ಲಾ ತಹಸೀಲ್ದಾರ್ ಅವರಿಗೆ ನಿರ್ದೇಶನ ನೀಡಿದ್ದಾರೆ. ಮರಣ ಪ್ರಕರಣಗಳಲ್ಲಿ ಮರಣ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಕೆಯಾಗಬೇಕು, ಎರಡು ಬಾರಿ ನೋಂದಣಿ ಆಗಿದ್ದರೆ ಎರಡನೇ ಎಪಿಕ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಈಗ ನಡೆದಿರುವ ಷಡ್ಯಂತ್ರ ವಿರುದ್ಧ ತನಿಖೆ ನಡೆಯಬೇಕು ಎಂಬ ಆಗ್ರಹಕ್ಕೆ ಸ್ಪಂದಿಸಿರುವ ಆಯೋಗ, ರಾಜ್ಯದಲ್ಲಿ ಫಾರ್ಮ್ 6, ಫಾರ್ಮ್ 6ಎ, ಫಾರ್ಮ್ 7 ಬಳಸಿ ಉದ್ದೇಶಪೂರ್ವಕವಾಗಿ ಸುಳ್ಳು ಹಾಗೂ ಭಾರಿ ಪ್ರಮಾಣದಲ್ಲಿ ಅರ್ಜಿಗಳನ್ನು ಸಲ್ಲಿಸಿರುವವರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂತಹ ಫಾರಂ 7 ಅರ್ಜಿಗಳು ನೈಜ ಅರ್ಜಿಗಳಲ್ಲ ಎಂದು ಆಯೋಗ ತಿಳಿಸಿದೆ ಎಂದು ಮಾಹಿತಿ ನೀಡಿದರು.

ಆಯೋಗದ ಸಂಧಾನಕ್ಕೆ ನಾವು ಬಗ್ಗಲಿಲ್ಲ. ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಕಾನೂನು ತಜ್ಞರು ಸಭೆ ಮಾಡಿ ಕೆಲವು ತೀರ್ಮಾನ ಕೈಗೊಂಡಿದ್ದಾರೆ. ನಮ್ಮ ಹೋರಾಟಕ್ಕೆ ಆಯೋಗ ಮಣಿದಿದೆ. ಅರ್ಹ ಮತದಾರರಿಗೆ ನ್ಯಾಯ ಒದಗಿಸುವ ಭರವಸೆ ಸಿಕ್ಕಿದೆ. ಸೂಕ್ತ ತನಿಖೆ ಆಗದೇ ಇದ್ದರೆ ಮತ್ತೆ ಹೋರಾಟ ಮಾಡುತ್ತೇವೆ. ಇದರಲ್ಲಿ ವಿರೋಧ ಪಕ್ಷಗಳು ಕುತಂತ್ರವಿದೆ. ನಮ್ಮ ದಾಖಲೆಗಳನ್ನು ನೋಡಿ ಆಯೋಗ ಅಚ್ಚರಿ ವ್ಯಕ್ತಪಡಿಸಿದೆ. ಇದು ನಾಡಿನ ಜನತೆ ನಮಗೆ ಕೊಟ್ಟಿರುವ ಹಕ್ಕು. 136 ಮಂದಿಯನ್ನು ಗೆಲ್ಲಿಸಿ ಇಡೀ ಜನರ ರಕ್ಷಣೆ ಮಾಡುವಂತೆ ಸೂಚಿಸಿದ್ದಾರೆ. ಆ ಪ್ರಕಾರ ನಾವು ಈ ನಾಡಿನ ಜನರ ಹಕ್ಕನ್ನು ರಕ್ಷಿಸಲು ಇಂದು ಹೋರಾಟ ಮಾಡಿದ್ದೇವೆ ಎಂದರು.

ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆದಿರುವ ಅತಿದೊಡ್ಡ ವಂಚನೆ. ರಾಜ್ಯ ಚುನಾವಣಾ ಆಯೋಗ ನಮ್ಮನ್ನು ಮನವೊಲಿಸಲು ಬಂದರು ನಾವು ಜಗ್ಗಲಿಲ್ಲ. ನಾವು ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿಲ್ಲ. ಮಹಾತ್ಮ ಗಾಂಧೀಜಿ ನಮಗೆ ಹೇಳಿಕೊಟ್ಟ ಮಾರ್ಗದಲ್ಲಿ ಚುನಾವಣೆ ಅಧಿಕಾರಿಗಳಿಗೆ ಅವರ ಕಚೇರಿಯಲ್ಲಿ ಕುಳಿತು ಅಕ್ರಮದ ಬಗ್ಗೆ ಮನದಟ್ಟು ಮಾಡಿಕೊಟ್ಟಿದ್ದೇವೆ. ಅವರಿಗೆ ಅಗತ್ಯ ದಾಖಲೆಗಳನ್ನು ನೀಡಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

ವಿರೋಧ ಪಕ್ಷಗಳು ಏನು ಬೇಕಾದರು ಮಾತನಾಡಿಕೊಳ್ಳಲಿ. ಅವರ ಬಗ್ಗೆ ಈಗ ಮಾತನಾಡುವುದಿಲ್ಲ. ನಾವು ಜನರ ಮತದಾನದ ಹಕ್ಕನ್ನು ರಕ್ಷಿಸಲು ಬದ್ಧರಾಗಿದ್ದಾರೆ. ಆಯೋಗ ನೋಟೀಸ್ ನೀಡಿರುವ ಬಾಕಿ 35 ಲಕ್ಷ ಮತದಾರರಿಗೆ ಅಗತ್ಯ ದಾಖಲೆ ಒದಗಿಸಲು ಸರ್ಕಾರ ಬದ್ಧವಾಗಿದೆ. ರಾಜ್ಯದ ಪ್ರತಿ ಅರ್ಹ ಮತದಾರರಿಗೆ ಮತದಾನದ ಹಕ್ಕು ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ