Breaking News

ಅಂತರ್‌ರಾಜ್ಯ ಬೈಕ್ ಕಳ್ಳರ ಬಂಧನ: 18 ಲಕ್ಷ ಮೌಲ್ಯದ 29 ದ್ವಿಚಕ್ರ ವಾಹನ ವಶಕ್ಕೆ

Spread the love

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ  ಅಂತರ್‌ರಾಜ್ಯ ಕಳ್ಳರ ಗ್ಯಾಂಗ್‌ನ್ನು ಹೆಡೆಮುರಿ ಕಟ್ಟುವಲ್ಲಿ ಜಿಗಣಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡು ಮೂಲದ ರಾಜಶೇಖರ್ (28), ಚರಣ್ ಕುಮಾರ್ (19) ಹಾಗೂ ಪವನ್ ಕುಮಾರ್ (21)ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬರೋಬ್ಬರಿ 18 ಲಕ್ಷ ರೂಪಾಯಿ ಮೌಲ್ಯದ 29 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ನಕಲಿ ಕೀಗಳನ್ನು ಬಳಸಿ ಹಾಗೂ ಹ್ಯಾಂಡಲ್ ಲಾಕ್‌ಗಳನ್ನು ಮುರಿದು ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದರು. ಬಳಿಕ ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಜಿಗಣಿ ಪೊಲೀಸ್ ಇನ್‌ಸ್ಪೆಕ್ಟರ್ ನವೀನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 


Spread the love

About Laxminews 24x7

Check Also

ಧಾರವಾಡದ ಸ್ಟೀಲ್‌ ಅಂಗಡಿಯಲ್ಲಿ ಅಗ್ನಿ ದುರಂತ – ಕಂತೆ ಕಂತೆ ಹಣ ಬೆಂಕಿಗಾಹುತಿ

Spread the loveಧಾರವಾಡ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಸ್ಟೀಲ್ ಅಂಗಡಿಗೆ ಬೆಂಕಿ  ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ