Breaking News
Home / Uncategorized / ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI

ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI

Spread the love

ಐಪಿಎಲ್ 2021 (IPL 2021) ರಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಎರಡನೇ ಚರಣದಲ್ಲಿ ಇಂದು ತನ್ನ ಅಭಿಯಾನ ಆರಂಭಿಸಲಿದೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ವಿರಾಟ್ ಕೊಹ್ಲಿ (Virat Kohli) ಪಡೆ ಕಣಕ್ಕಿಳಿಯಲಿದ್ದು ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ. ಇದಕ್ಕಾಗಿ ಆರ್​ಸಿಬಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಪ್ಲಾನ್ ಮಾಡಿಕೊಂಡಿದೆ. ಮೊದಲ ಚರಣಕ್ಕಿಂತ ಈ ಬಾರಿ ಬೆಂಗಳೂರು ಮತ್ತಷ್ಟು ಬಲಿಷ್ಠವಾಗಿದ್ದು ಕೆಲ ಹೊಸ ಆಟಗಾರರು ಸೇರಿಕೊಂಡಿದ್ದಾರೆ. ಹಾಗಾದ್ರೆ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ (RCB Playing XI) ಹೇಗಿರಲಿದೆ?, ಯಾವೆಲ್ಲ ಆಟಗಾರರು ಕಣಕ್ಕಿಳಿಯಬಹುದು ಎಂಬುದನ್ನು ನೋಡೋಣ.

ಆರ್​ಸಿಬಿ ಪರ ಓಪನರ್​ಗಳಾಗಿ ನಾಯಕ ವಿರಾಟ್ ಕೊಹ್ಲಿ ಜೊತೆ ದೇವದತ್ ಪಡಿಕ್ಕಲ್ ಕಣಕ್ಕಿಳಿಯುವುದು ಖಚಿತ. ಈ ಜೋಡಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರೆ ಅರ್ಧದಷ್ಟು ಪಂದ್ಯ ಗೆದ್ದಂತೆ. ಮೂರನೇ ಕ್ರಮಾಂಕದಲ್ಲಿ ಈ ಹಿಂದೆ ರಜತ್ ಪಟಿದಾರ್ ಆಡುತ್ತಿದ್ದರು. ಪಟಿದಾರ್ ಮೊದಲ ಚರಣದಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಆದರೆ, ಕಳೆದ ಅಭ್ಯಾಸ ಪಂದ್ಯದಲ್ಲಿ ಮೊಹಮ್ಮದ್ ಅಜರುದ್ದೀನ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಭರವಸೆ ಮೂಡಿಸಿದ್ದಾರೆ. ಹೀಗಾಗಿ ಇವರ ಜಾಗಕ್ಕೆ ಅಜರುದ್ದೀನ್ ಬಂದರೂ ಬರಬಹುದು.

ನಾಲ್ಕನೇ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಣಕ್ಕಿಳಿಯಲಿದ್ದು ಇವರ ಪಾತ್ರ ಬಹಳ ಮುಖ್ಯವಾಗಿದೆ. ಆರ್​ಸಿಬಿ ಪರ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿರುವ ಮ್ಯಾಕ್ಸ್​ವೆಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಇನ್ನೂ 5ನೇ ಕ್ರಮಾಂಕದಲ್ಲಿ ದಿ ಗ್ರೇಟ್ ಫಿನಿಶರ್ ಎಬಿ ಡಿವಿಲಿಯರ್ಸ್ ಆಡಲಿದ್ದಾರೆ. 15 ಓವರ್ ಬಳಿಕ ಇವರಿಗೆ ಬ್ಯಾಟಿಂಗ್ ಅವಕಾಶ ಲಭಿಸಿದರೆ ಎದುರಾಳಿಗೆ ಇವರು ಮಾರಕವಾಗಿ ಪರಿಣಮಿಸುತ್ತಾರೆ.

ಶಹ್ಬಾಜ್ ಅಹ್ಮದ್ ನಂತರದ ಸ್ಥಾನದಲ್ಲಿ ಆಡಿದರೆ, ವಾನಿಂದು ಹಸರಂಗ ಸ್ಥಾನ ಪಡೆಯುವ ಸಂಭವವಿದೆ. ಬಳಿಕ ಕೈಲ್ ಜೇಮಿಸನ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಬೌಲಿಂಗ್​ನಲ್ಲಿ ಜೇಮಿಸನ್ ತಮ್ಮ ಅದ್ಭುತ ಪ್ರದರ್ಶನ ತೋರುತ್ತಿದ್ದಾರೆ. ಜೊತೆಗೆ ಬ್ಯಾಟಿಂಗ್​ನಲ್ಲೂ ಇವರು ಸದ್ದು ಮಾಡುತ್ತಿದ್ದಾರೆ. ಇನ್ನುಳಿದಂತೆ ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಯುಜ್ವೇಂದ್ರ ಚಹಾಲ್ ತಮ್ಮ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ.

ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ರಜತ್ ಪಟಿದಾರ / ಮೊಹಮ್ಮದ್ ಅಜರುದ್ದಿನ್, ಗ್ಲೆನ್ ಮ್ಯಾಕ್ಸ್​ವೆಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಶಹ್ಬಾಜ್ ಅಹ್ಮದ್, ವಾನಿಂದು ಹಸರಂಗ, ಕೈಲ್ ಜೇಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ