Breaking News

IPL 2021 Live Score, MI vs RCB: ಆರ್​ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ

Spread the love

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್​ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್​ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್​ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್​ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ ತುಡಿತದಲ್ಲಿದೆ. ಆದರೆ ಮೊದಲ ಪಂದ್ಯದಲ್ಲೇ ಶುಭಾರಂಭ ಮಾಡುವ ಮೂಲಕ ಈ ಬಾರಿ ಕಪ್ ಗೆದ್ದೇ ಗೆಲ್ಲಬೇಕೆಂಬ ಇರಾದೆಯಲ್ಲಿದೆ ಆರ್​ಸಿಬಿ.

ಎರಡೂ ತಂಡಗಳ ಬಲಾಬಲ ನೋಡುವುದಾದರೆ, ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್​ ತಂಡದ್ದೇ ಮೇಲುಗೈ ಎನ್ನಬಹುದು. ಏಕೆಂದರೆ ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು 29 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಮುಂಬೈ 19 ಗೆಲುವು ದಾಖಲಿಸಿದರೆ, ಆರ್​ಸಿಬಿ 10 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಕಳೆದ ಸೀಸನ್​ನಲ್ಲಿ ಮುಂಬೈ ಆರ್​ಸಿಬಿ ವಿರುದ್ಧ ಒಂದು ಪಂದ್ಯ ಗೆದ್ದುಕೊಂಡರೆ, ಆರ್​ಸಿಬಿ ಮುಂಬೈಯನ್ನು ಸೂಪರ್​ ಓವರ್​ನಲ್ಲಿ ಮಣಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳು ಗೆಲ್ಲಲು ಕಠಿಣ ಪೈಪೋಟಿ ನಡೆಸಬೇಕಾಗಿ ಬರಲಿದೆ.


 


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

Spread the love ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ