Breaking News

ಯಾವ ಪುರುಷಾರ್ಥಕ್ಕೆ ಸಾವಿರ ದಿನಗಳ ಸಂಭ್ರಮ? ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಈರಣ್ಣ ಕಡಾಡಿ ಕಿಡಿ

Spread the love

ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳಾಗಿವೆ. ಇಂದು ಹಾವೇರಿಯಲ್ಲಿ ಬೃಹತ್‌ ಪ್ರಮಾಣದ ಸಾವಿರ ದಿನಗಳ ಸಂಭ್ರಮಾಚರಣೆ ಸಮಾವೇಶ ನಡೆಸಲಾಗುತ್ತಿದೆ “ಯಾವ ಪುರುಷಾರ್ಥಕ್ಕೆ ? ಈ ಸಮಾವೇಶ ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವಾಗ್ದಾಳಿ ನಡೆಸಿದರು.

ಶನಿವಾರ ಫೆ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯದಲ್ಲಿ ಕಾಂಗ್ರೇಸ್‌ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ 3731 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ, ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ಹಾವೇರಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ,” ಎಂದು ಅವರು ಕಿಡಿ ಕಾರಿದರು.

2500 ಕೋಟಿ ರೂ.ಗಳ ಅಬಕಾರಿ ಹಗರಣ, 5000 ಕೋಟಿ ರೂ.ಗಳ ಗೃಹಲಕ್ಷ್ಮಿ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾರ್ಮಿಕ ಇಲಾಖೆ ಕಿಟ್ ಹಗರಣ, ಮೈಸೂರಿನ ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ.ಗಳ ಹಣವನ್ನು ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಳಕೆಯಾಗಿದೆ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಿದ್ದ 14,730 ಕೋಟಿ ರೂ.ಗಳ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ. ಇದರಿಂದ ಶೋಷಿತ ಜನಾಂಗಕ್ಕೆ ಅನ್ಯಾಯವಾಗಿದೆ. ಶೋಷಿತ ವರ್ಗಗಳ ಅಭಿವೃದ್ದಿಗಾಗಿ ಸ್ಥಾಪಿಸಲ್ಪಟ್ಟ 10 ಕ್ಕೂ ಹೆಚ್ಚು ನಿಗಮಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಲಾರದ ಶೋಚನೀಯ ಸ್ಥಿತಿ ಎಂದರಲ್ಲದೇ ಅಲ್ಪಸಂಖ್ಯಾಂತ ಅಭಿವೃದ್ದಿ ನಿಗಮದಲ್ಲಿ ಸಾಲ ಪಡೆದವರ ಬಡ್ಡಿ ಮನ್ನಾ ಮಾಡುವ ಮೂಲಕ ತುಷ್ಠಿಕರಣ ನೀತಿಯನ್ನು ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಷ್ಟ್ರಚಾರ, ಆಡಳಿತ ವ್ಯಪಲ್ಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಹಗರಣಗಳ ಸರಮಾಲೆ ಈ ಎಲ್ಲದಕ್ಕೂಇಂದಿನ ಸಮಾವೇಶ ರಾಜ್ಯದ ಜನರಿಗೆ ಉತ್ತರ ನೀಡುವಿರಾ ?…. ಯಾವ ಪುರುಷಾರ್ಥಕ್ಕೆ ? ಈ ಸಮಾವೇಶ ಎಂದು ಸಂಸದ ಈರಣ್ಣ ಕಡಾಡಿ ರಾಜ್ಯ ಕಾಂಗ್ರೇಸ್‌ ಸರ್ಕಾರದ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ