Breaking News

ಅಕ್ರಮ ಹಣದ ವ್ಯವಹಾರಲ್ಲೂ ಭಾಗಿಯಾಗಿದ್ದಾರಾ ಗ್ಯಾನೇಂದ್ರ? ಸತತ 5 ಗಂಟೆಗಳಿಂದ ಇಡಿ ಶೋಧ

Spread the love

ಬೆಂಗಳೂರು: ನಾಪತ್ತೆಯಾಗಿರುವ ಐಎಎಸ್‌ ಗ್ಯಾನೇಂದ್ರ ಕುಮಾರ್‌ ಅವರ ಮನೆ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತತ 5 ಗಂಟೆಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.‌

ಜಯಮಹಲ್ ಎಕ್ಸ್‌ಟೆನ್ಞನ್‌ ರಸ್ತೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಇದರ ಮಧ್ಯೆಯೇ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅಕ್ರಮ ಹಣದ ವ್ಯವಹಾರದಲ್ಲೂ ಗ್ಯಾನೇಂದ್ರ ಭಾಗಿಯಾಗಿದ್ದಾರೆ ಅನ್ನೋ ಮಾಹಿತಿ ಇಡಿ ಮೂಲಗಳಿಂದ ತಿಳಿದುಬಂದಿದೆ.

ಇದಕ್ಕೂ ಮುನ್ನ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ, ಸದಸ್ಯೆ ಶಾಂತ ಹೊಸಮನಿ, ಕೆಪಿಎಸ್ಸಿ ಕಚೇರಿ, ಕೆಲ ಅಧಿಕಾರಿಗಳು, ದಲ್ಲಾಳಿಗಳು ಹಾಗೂ ಅಭ್ಯರ್ಥಿಗಳ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಹಾಗೂ ಸಾಕ್ಷ್ಯಗಳು ಪತ್ತೆಯಾಗಿದ್ದವು.

ಪತ್ತೆಯಾದ ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ವ್ಯವಹಾರಕ್ಕೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರಿಗೂ ಸಂಪರ್ಕ ಇರುವ ಬಗ್ಗೆಯೂ ದಾಖಲೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆ ಇಂದು ಗ್ಯಾನೇಂದ್ರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳು ಹಾಗೂ ಇತರ ಸಾಕ್ಷ್ಯಗಳನ್ನ ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ

Spread the loveಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ