Breaking News

KPCC ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಫಿಕ್ಸ್‌?

Spread the love

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಹೆಸರು ಖಚಿತಗೊಂಡಿದೆ. ಈ ಹಿನ್ನೆಲೆ ತೆರವಾಗುವ ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ಯಾರು ಬರುತ್ತಾರೆ ಅನ್ನೋ ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ ಹಾಕಿದೆ.

ಶಾಸಕಾಂಗ ಪಕ್ಷದ ನಾಯಕನಾಗುತ್ತಿದ್ದಂತೆ ಡಿಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅದರಿಂದ ತೆರವಾಗುವ ಸ್ಥಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.

ಸತೀಶ್‌ ಜಾರಕಿಹೊಳಿ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಈಗಾಗಲೇ ಮಾತುಕತೆ ನಡೆಸಿದ್ದು, ಕೆಪಿಸಿಸಿ ಅಧ್ಯಕ್ಷರಾಗುವಂತೆ ಹೇಳಿದ್ದಾರೆ. ಆದ್ರೆ ‌ಸತೀಶ್‌ ಜಾರಕಿಹೊಳಿ ಅವರು, ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಬೇಡಿಕೆಯಿಟ್ಟಿದ್ದಾರೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಾತುಕತೆ ನಡೆಸಿದಾಗಲೂ ಸತೀಶ್‌ ಜಾರಕಿಹೊಳಿ ಇದೇ ಪ್ರಸ್ತಾಪ ಇಟ್ಟಿದ್ದರು. ಆದ್ರೆ ಹೈಕಮಾಂಡ್‌ ಈ ಡಿಮ್ಯಾಂಡ್ ಒಪ್ಪುತ್ತಾ ಎಂಬುದನ್ನ ಕಾದುನೋಡಬೇಕಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ