ಗ್ರಾಮೀಣ ಜಾತ್ರೆಗಳನ್ನು ನೋಡುವುದೇ ಚೆಂದ: ಲಕ್ಷ್ಮೀ ಹೆಬ್ಬಾಳಕರ್

Spread the love

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ, ನೂತನ ರಥೋತ್ಸವ ಮತ್ತು ಶ್ರೀ ಗ್ರಾಮದೇವಿಯ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರಾಮಸ್ಥರಿಗೆ ಶುಭ ಕೋರಿದರು.
ಗ್ರಾಮೀಣ ಭಾಗದಲ್ಲಿ ನಡೆಯುವ ಜಾತ್ರೆಗಳನ್ನು ನೋಡುವುದೇ ಚೆಂದ. ಗ್ರಾಮಸ್ಥರೆಲ್ಲ ಒಟ್ಟಾಗಿ ಭಕ್ತಿ ಹಾಗೂ ಸಂಭ್ರಮದಿಂದ ಜಾತ್ರೆಯನ್ನು ಆಚರಿಸುತ್ತಾರೆ. ಇದು ಗ್ರಾಮಗಳ ಒಗ್ಗಟ್ಟಿನ ಪ್ರತೀಕವೂ ಹೌದು ಎಂದು ಹೆಬ್ಬಾಳಕರ್ ಹೇಳಿದರು.
ನಾಗೇರಹಾಳ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಈಗಾಗಲೆ ಅನುದಾನ ಮಂಜೂರಾಗಿದ್ದು, ಇಷ್ಟರಲ್ಲೆ ಕೆಲಸ ಆರಂಭವಾಗಲಿದೆ. ಈಗಾಗಲೆ ಗ್ರಾಮಕ್ಕೆ 2 ಕೋಟಿ ರೂ.ಗಳಿಗಿಂತೆ ಹಚ್ಚಿನ ಅನುದಾನ ಒದಗಿಸಲಾಗಿದೆ. ಇಡೀ ಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಅವರು ಹೇಳಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಗ್ರಾಮದ ಭಕ್ತಾಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ