Home / ಜಿಲ್ಲೆ / ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ: ಜಗದೀಶ್ ಶೆಟ್ಟರ್

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ: ಜಗದೀಶ್ ಶೆಟ್ಟರ್

Spread the love

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ ಕುರಿತು ವೈದ್ಯಕೀಯ ಸಚಿವ ಸುಧಾಕರ್ ಜತೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ   ತಿಳಿಸಿದರು.

ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರುವಾರ ಕೊರೊನಾ ನಿಯಂತ್ರಣ ಕುರಿತು ನಡೆದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಲಹೆ ನೀಡಿದರು.
ಲಾಕ್ ಡೌನ್ ಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಎಲ್ಲ ಜನಪ್ರತಿನಿಧಿಗಳಿಗೆ ಕಳುಹಿಸಿ, ಅವರ ಮೂಲಕ ಆಯಾ ಕ್ಷೇತ್ರದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ವೈದ್ಯರು, ಸಿಬ್ಬಂದಿ ಸೇರಿದಂತೆ ಅಗತ್ಯವಿರುವ ಸಲಕರಣೆಗಳನ್ನು ಮುಂಚಿತವಾಗಿಯೇ ಸಂಗ್ರಹಿಸಿಟ್ಟುಕೊಳ್ಳಬೇಕು. ತುರ್ತು ಸಾಮಗ್ರಿ ಆಥವಾ ಸಲಕರಣೆಗಳ ಅಗತ್ಯವಿದ್ದರೆ ತಕ್ಷಣವೇ ಸರ್ಕಾರಕ್ಕೆ ಪ್ರಸ್ತಾವ ಕಳಿಸಿಕೊಡಬೇಕು ಎಂದು ಸಚಿವ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೇಂದ್ರ ನಿಯಮಗಳನ್ನು ಪಾಲಿಸಿದಾಗ ಮಾತ್ರ ಕೊರೊನಾ ತಡೆಗಟ್ಟಲು ಸಾಧ್ಯ. ಆದ ಕಾರಣ ಜನರಿಗೆ ಮನೆಯಲ್ಲಿಯೇ ಇರುವಂತೆ ನೋಡಿಕೊಳ್ಳಬೇಕು ಎಂದರು.

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸಂಸದ ಸುರೇಶ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ್ ಕೋರೆ, ಶಾಸಕರಾದ ಸತೀಶ್ ಜಾರಕಿಹೊಳಿ, ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡ್ರ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ