Breaking News

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Spread the love

ದಾವಣಗೆರೆ: ಜಗಳೂರಲ್ಲಿ  ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.

ನಗರದ ಹಲವು ಹೋಟೆಲ್ ಹಾಗೂ ಟೀ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ ನಡೆಸಿದಾಗ ಗೃಹ ಬಳಕೆಯ ಸಿಲಿಂಡರ್‌ಗಳು ಪತ್ತೆಯಾಗಿವೆ.

ಗೃಹ ಬಳಕೆ ಸಿಲಿಂಡರ್‌ಗಳನ್ನು ಹೋಟೆಲ್‍ಗಳಲ್ಲಿ ಬಳಕೆ ಮಾಡುವಂತಿಲ್ಲ. ಆದರೆ ಕಮರ್ಷಿಯಲ್ ಸಿಲಿಂಡರ್ ಅಭಾವದ ಹಿನ್ನಲೆ ಗೃಹ ಬಳಕೆ ಸಿಲಿಂಡರ್‌ಗಳನ್ನು ಹೋಟೆಲ್ ಮಾಲೀಕರು ಬಳಕೆ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Spread the loveದಾವಣಗೆರೆ/ಬೆಂಗಳೂರು: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಮೂವರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ