Breaking News

ಜೂ.21ರಂದು ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ

Spread the love

 ಬೆಳಗಾವಿ : ಕರ್ನಾಟಕ ಕೇಸರಿ ಎಂದೇ ಖ್ಯಾತರಾಗಿದ್ದ ಮಾಜಿ ಸಂಸದ ದಿ. ಶ್ರೀ ಜಗನ್ನಾಥರಾವ್ ಜೋಶಿಯವರ ಅವರ ಹೆಸರಿನಲ್ಲಿ ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ *ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ*ವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಲೋಕಾರ್ಪಣೆ ಸಮಾರಂಭ ಜೂನ್ 21ರಂದು ನಡೆಯಲಿದೆ.

ಜನಕಲ್ಯಾಣ ಟ್ರಸ್ಟ್, ಬೆಳಗಾವಿ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ನಗರದ ಗೂಡ್ಸ್ ಶೆಡ್ ರಸ್ತೆಯ ಸಂಘ ಸಧನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ.

ಕಾರಂಜಿಮಠದ ಶ್ರೀ ಗರುಸಿದ್ಧ ಮಹಾಸ್ವಾಮಿಗಳು  ದಿವ್ಯ ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಸ್ಮಾರಕ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಂಚಾಲಕ ಬಸವರಾಜ ದಂಬಳ ವಹಿಸಲಿದ್ದಾರೆ.

 ಜಗನ್ನಾಥರಾವ್ ಜೋಶಿಯವರ ರಾಷ್ಟ್ರಸೇವೆಯ ಆದರ್ಶ, ತ್ಯಾಗ ಮತ್ತು ಸಮಾಜಮುಖಿ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಸ್ಮಾರಕ ಭವನವನ್ನು ನಿರ್ಮಿಸಲಾಗಿದೆ ಎಂದು

ಜನಕಲ್ಯಾಣ ಟ್ರಸ್ಟ್ ನಿರ್ವಾಹಕ ವಿಶ್ವಸ್ಥ ಅರವಿಂದರಾವ್ ದೇಶಪಾಂಡೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಛತ್ತೀಸ್‌ಗಢ ಸಚಿವ ಗಜೇಂದ್ರ ಯಾದವ್ ಐತಿಹಾಸಿಕ ಲಕ್ಕುಂಡಿ ಕ್ಷೇತ್ರಕ್ಕೆ ಭೇಟಿ: ಪರಂಪರೆಗೆ ಶ್ಲಾಘನೆ

Spread the loveಗದಗ: ಛತ್ತೀಸ್‌ಗಢ ರಾಜ್ಯದ ಶಾಲಾ ಶಿಕ್ಷಣ, ಗ್ರಾಮೋದ್ಯಮ, ಕಾನೂನು ಹಾಗೂ ಶಾಸನ ವ್ಯವಹಾರಗಳ ಸಚಿವರಾದ ಗಜೇಂದ್ರ ಯಾದವ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ