Breaking News

250 ಚಿತ್ರಗಳಲ್ಲಿ ನಟಿಸಿದ ಹಿರಿಯ ಕಲಾವಿದನಿಗೆ ಕಿಡ್ನಿ ವೈಫಲ್ಯ- ಉಳಿಸಿಕೊಳ್ಳಲು ಜಗ್ಗೇಶ್ ಪ್ರಯತ್ನ

Spread the love

 

ಬೆಂಗಳೂರು: ನವರಸನಾಯಕ ಜಗ್ಗೇಶ್ ಇತ್ತೀಚೆಗಷ್ಟೇ ಒಂದು ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಕಲಾವಿದನ ಬಗ್ಗೆ ಮಾತನಾಡಿ ಭಾವುಕರಾಗಿದ್ದರು. ಇದೀಗ ಆ ಕಲಾವಿದ ಯಾರು ಎಂಬುದನ್ನು ತಿಳಿಸಿದ್ದಾರೆ.

ಜಗ್ಗೇಶ್ ಅಂದು ಕನ್ನಡ ಚಿತ್ರರಂಗದ ಪೋಷಕ ನಟ ಕಿಲ್ಲರ್ ವೆಂಕಟೇಶ್ ಬಗ್ಗೆ ಮಾತನಾಡಿದ್ದು. ಇವರು ಒಂದು ಕಾಲದಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಗುರುತಿಸಿಕೊಂಡಿದ್ದರು. ಆದರೆ ಇಂದು ವೆಂಕಟೇಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡುವ ಮೂಲಕ ಬೇಸರವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೆ ಒಂದು ಅವಾರ್ಡ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸುಮಾರು 200ಕ್ಕೂ ಹೆಚ್ಚು ಸಿನಿಮಾದಲ್ಲಿ ಅಭಿನಯಿಸಿರುವ ಕಲಾವಿದ ನನಗೆ ಫೋನ್ ಮಾಡಿ ಭೇಟಿ ಮಾಡಿದ್ದನು. ಅವನು ನನ್ನ ಬಳಿ ಬಂದು ಮಗು ತರ ಕಣ್ಣೀರು ಹಾಕಿದ. ಯಾಕೆಂದರೆ ಅವನ ಬಳಿ ಒಂದು ಕೆ.ಜಿ ಅಕ್ಕಿ ತರಲು ಹಣವಿರಲಿಲ್ಲ. ಇದು ನಮ್ಮ ಚಿತ್ರರಂಗ ಎಂದು ಕಲಾವಿದನ ಇಂದಿನ ಬದುಕನ್ನು ನೆನೆದು ಬೇಸರ ವ್ಯಕ್ತಪಡಿಸಿದ್ದರು.

ಗ್ಗೇಶ್, ಕಿಲ್ಲರ್ ವೆಂಕಟೇಶ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಕಿಲ್ಲರ್ ವೆಂಕಟೇಶ್ ಒಂದು ಕಾಲದಲ್ಲಿ ಬೇಡಿಕೆಯ ಖಳನಟ ಹಾಗೂ ಪೋಷಕನಟರಾಗಿದ್ದರು. ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಜಗ್ಗೇಶ್ ಹಾಗೂ ಕಿಲ್ಲರ್ ವೆಂಕಟೇಶ್ ಜೊತೆಯಾಗಿ ‘ರಣಧೀರ’ ಸಿನಿಮಾದಲ್ಲಿ ಅಭಿನಯಿಸಿದ್ದರು. ಅಂದಿನಿಂದಲೂ ವೆಂಕಟೇಶ್ ಪೋಷಕ ಪಾತ್ರಗಳಲ್ಲಿಯೇ ಅಭಿನಯಿಸುತ್ತಿದ್ದರು. ಆದರೆ ಬರುಬರುತ್ತಾ ಇವರಿಗೆ ಸಿನಿಮಾ ಅವಕಾಶಗಳು ಕಡಿಮೆಯಾಗಿದೆ. ಹೀಗಾಗಿ ವೆಂಕಟೇಶ್ ಯಾವುದೇ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ.


Spread the love

About Laxminews 24x7

Check Also

ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳ ಜಲಸಮಾಧಿ

Spread the loveಮೈಸೂರು : ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳು ಜಲಸಮಾಧಿಯಾಗಿರುವ ಘಟನೆ ತಿ. ನರಸೀಪುರ ಪಟ್ಟಣದಲ್ಲಿ ನಡೆದಿದೆ. ತಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ