Breaking News

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ನಿರಂತರ ಹಿಮಪಾತವಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಹಿಮಪಾತ  ಹೆಚ್ಚಾಗಿದ್ದು, ಶ್ರೀನಗರದ ವಿಮಾನ ನಿಲ್ದಾಣದಲ್ಲಿ ಹಿಮ ತೆರವು ಕಾರ್ಯ ನಡೆಯುತ್ತಿದೆ.

ಏಪ್ರನ್ ಮತ್ತು ಟ್ಯಾಕ್ಸಿ ವೇ ಗಳಲ್ಲಿನ ಹಿಮ ತೆರವು ಮಾಡಿ ವಿಮಾನಗಳ ಹಾರಾಟಕ್ಕೆ ಪರೀಕ್ಷೆಗಳು ನಡೆಯುತ್ತಿವೆ. ಶೀಘ್ರದಲ್ಲೇ ವಾಣಿಜ್ಯ ಬಳಕೆಗೆ ವಿಮಾನ ನಿಲ್ದಾಣ ಮುಕ್ತವಾಗುವ ನಿರೀಕ್ಷೆಯಿದೆ.

ಇನ್ನು ಹಿಮಾಚಲ ಪ್ರದೇಶದಲ್ಲೂ ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು, 600 ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಮನಾಲಿಯಲ್ಲಿ, ತಾಪಮಾನವು ಶೂನ್ಯಕ್ಕಿಂತ ಕಡಿಮೆಯಾಗಿದ್ದು, ಅನೇಕರು ಆಹಾರ, ನೀರು, ಕಂಬಳಿ ಇಲ್ಲದೆ ತಮ್ಮ ವಾಹನಗಳ ಒಳಗೆ ಇಡೀ ರಾತ್ರಿ ಕಳೆದಿದ್ದಾರೆ.

ಹಿಮದಿಂದ ರಸ್ತೆಗಳು ಸಂಪರ್ಕ ಕಡಿತಗೊಂಡಿವೆ. ಬಸ್ಸುಗಳು, ಟ್ಯಾಕ್ಸಿಗಳು ಮತ್ತು ಪ್ರವಾಸಿ ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿ ಪರದಾಡುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ