Breaking News
Home / ಜಿಲ್ಲೆ / ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.

ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.

Spread the love

ಬೆಳಗಾವಿ: ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.

ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಾದ ಲಕ್ಷ್ಮಣ ಸವದಿ ಅವರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರ್ಕಾರ ಮೇಳವನ್ನು ಆಯೋಜಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ರಸಗೊಬ್ಬರಗಳ ಅತೀಯಾದ ಬಳಕೆಯಾಗುತ್ತಿದೆ. ಆರೋಗ್ಯಕರ ಆಹಾರದ ಕಡೆ ಗಮನಹರಿಸಬೇಕಿದೆ.
ರಾಸಾಯನಿಕ ಬಳಕೆಯಿಂದ ನಮ್ಮ ಭೂಮಿಯ ಫಲವತ್ತತೆ ಹಾಳು ಮಾಡುತ್ತಿದ್ದೇವೆ. ಹಿರಿಯರು ನೀಡಿದ ಭೂಮಿ ರಕ್ಷಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕರೆ ನೀಡಿದರು.

ಸಾವಯವ-ಸಿರಿಧಾನ್ಯ ಮೇಳದ ಜತೆಗೆ ಫಲಪುಷ್ಪ ಪ್ರದರ್ಶನ-೨೦೨೦ ಕೂಡ ನಡೆಯಲಿದ್ದು, ಸಾರ್ವಜನಿಕರು, ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಕೃಷಿ ಇಲಾಖೆಯ ಹಿರಿಯ ಅಧಿಕಾರಿ ಡಾ.ವಿ.ಜೆ.ಪಾಟೀಲ, ಜಂಟಿ ನಿರ್ದೇಶಕರಾದ ಜಿಲಾನಿ ಮೊಖಾಶಿ, ಉಪ ನಿರ್ದೇಶಕರಾದ ಎಚ್.ಡಿ.ಕೋಳೆಕರ, ತೋಟಗಾರಿಕೆ ಉಪ ನಿರ್ದೇಶಕ ರವೀಂದ್ರ ಹಕಾಟಿ ಮತ್ತಿತರರು ಉಪಸ್ಥಿತರಿದ್ದರು.

ಚೆನ್ನಮ್ಮ ವೃತ್ತದಿಂದ ಆರಂಭಗೊಂಡ ಸಾವಯವ-ಸಿರಿಧಾನ್ಯ ನಡಿಗೆಯು ನಗರದ ಪ್ರಮುಖ ರಸ್ತೆಗಳ ಮೂಲಕ ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನವನ್ನು ತಲುಪಿತು.

ನಡಿಗೆಯಲ್ಲಿ ಭಾಗವಹಿಸಿದ್ದ ವಿವಿಧ ಶಾಲಾ ಮಕ್ಕಳು “ದೇಹದ ದಣಿವಿಗೆ ಸಿರಿಧಾನ್ಯದ ಅಡಿಗೆ, ಸಿರಿಧಾನ್ಯ ಹಳೆ ಊಟ ಹೊಸ ನೋಟ” ಎಂಬ ಘೋಷಣೆಗಳ ಮೂಲಕ ಜೋಳ, ಸಾವಿ, ಸಜ್ಜೆ, ನವಣೆ ಸೇರಿದಂತೆ ವಿವಿಧ ಬಗೆಯ ಸಿರಿಧಾನ್ಯಗಳ ಮಹತ್ವ ಸಾರಿದರು.


Spread the love

About Laxminews 24x7

Check Also

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

Spread the love ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ