Breaking News

‘JDSನ ಓಡಿಸಿ’ ಎಂದ ಸಿದ್ದರಾಮಯ್ಯ.. ‘ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ’ ಅಂತ HDK ಗರಂ

Spread the love

ಬೆಂಗಳೂರು: ಬಿಜೆಪಿಯ ಭ್ರಷ್ಟಾಚಾರಕ್ಕೆ ಜೆಡಿಎಸ್​ ಪಕ್ಷ ಬಾಲಂಗೋಚಿಯಾಗಿದೆ. ಆದ್ದರಿಂದ ತುಮಕೂರಿನಿಂದ ಜೆಡಿಎಸ್​​ ಪಕ್ಷವನ್ನು ಓಡಿಸಿ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಅಲ್ಲದೇ ತುಮಕೂರಿನಿಂದ ಜೆಡಿಎಸ್​​​ ಅನ್ನು ಓಡಿಸಿ ಅನ್ನೋದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಎಂದು ಪ್ರಶ್ನಿಸಿದ್ದಾರೆ.

 

ಸಿದ್ದರಾಮಯ್ಯ ಅವರ ಹೇಳಿಕೆ ಕುರಿತಂತೆ ಸರಣಿ ಟ್ವೀಟ್​ ಮಾಡಿರುವ ಕುಮಾರಸ್ವಾಮಿ ಅವರು, ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವಾ ಜೆಡಿಎಸ್‌ ಬಗ್ಗೆ ಮಾತನಾಡುವುದು?


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ