Breaking News

ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕನ ದರ್ಪ

Spread the love

ಬೆಂಗಳೂರು: ನಗರದಲ್ಲಿ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕ ಗೊಟ್ಟಿಗೆರೆ ಮಂಜ ದರ್ಪ ತೋರಿರುವ ಘಟನೆ ನಡೆದಿದೆ.

‘ನನ್ನ ಗಾಡಿಯನ್ನೇ ಸ್ಟಾಪ್‌ ಮಾಡ್ತೀಯಾ’ ಅಂತ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಸಿಬ್ಬಂದಿ ಕೊರಳ ಪಟ್ಟಿ ಹಿಡಿದು ಜಗಳ ಮಾಡುತ್ತಿರುವ ದೃಶ್ಯದ ವೀಡಿಯೋ ಹರಿದಾಡಿದೆ.

ಗೊಟ್ಟಿಗೆರೆ ಬಳಿ ಟ್ರಾಫಿಕ್ ಸಿಬ್ಬಂದಿ ನಿಂತಿದ್ದರು. ಈ ವೇಳೆ ಕೊಟ್ಟಿಗೆರೆ ಮಂಜ ಎಂಬವರ ವಾಹನವನ್ನು ಪೊಲೀಸ್ ಸಿಬ್ಬಂದಿ ಸ್ಟಾಪ್ ಮಾಡಿದ್ದಾರೆ. ‘ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ’ ಎಂದು ಸಿಬ್ಬಂದಿ ಮೇಲೆ ಜೆಡಿಎಸ್‌ ನಾಯಕ ಹಲ್ಲೆಗೆ ಮುಂದಾಗಿದ್ದರೆಂಬ ಆರೋಪ ಕೇಳಿಬಂದಿದೆ.

ಟ್ರಾಫಿಕ್ ಸಿಬ್ಬಂದಿ ಕೊರಳ ಪಟ್ಟಿ ಹಿಡಿದು ಹಲ್ಲೆ ಯತ್ನಿಸಿದ್ದಾರೆ. ಈ ವೇಳೆ, ಸಾರ್ವಜನಿಕರೆಲ್ಲರೂ ಸೇರಿ ಜಗಳ ಬಿಡಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ