Breaking News
Home / ಜಿಲ್ಲೆ / ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ

ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ

Spread the love

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು.

ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು .

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987 ಮತ್ತು 1994 ಹೀಗೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು. ನಂತರ ಅಭಯಚಂದ್ರ ಅವರ ಎದುರು ನಿರಂತರ ಪರಾಭವಗೊಂಡು, ಬಳಿಕ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.


Spread the love

About Laxminews 24x7

Check Also

ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ..!

Spread the loveಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಸಿಲಿಂಡರ್ ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ