Breaking News

ನೂರು ಕ್ಷೇತ್ರಗಳಿಗೆ ಜೆಡಿಎಸ್‌ ಇಂದು ಅಭ್ಯರ್ಥಿಗಳ ಘೋಷಣೆ ?

Spread the love

ಗಡಿ ಜಿಲ್ಲೆಯ ಕುರುಡು ಮಲೆಯ ಗಣಪತಿಗೆ ಮಂಗಳವಾರ (ನ.1) ಬೆಳಿಗ್ಗೆ 9 ಗಂಟೆಗೆ ಪೂಜೆ ಸಲ್ಲಿಸಿ ಜೆಡಿಎಸ್‌ನ ಮಹತ್ವಾಕಾಂಕ್ಷೆಯ ‘ಪಂಚರತ್ನ’ ರಥಯಾತ್ರೆ ಹಾಗೂ ಚುನಾ ವಣಾ ಪ್ರಚಾರಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಅಧಿಕೃತ ಚಾಲನೆ ನೀಡಲಿದ್ದಾರೆ.

 

 

ವಿಧಾನಸಭೆ ಚುನಾವಣೆ ಘೋಷಣೆಗೆ ಮುನ್ನವೇ ಪಕ್ಷದ 100 ಅಭ್ಯರ್ಥಿಗಳ ಪಟ್ಟಿಯನ್ನೂ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

 

ಮಧ್ಯಾಹ್ನ 2.30ಕ್ಕೆ ಮುಳಬಾಗಿಲು ನಗರದ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಭಾಗವಹಿಸಲಿದ್ದಾರೆ.

 

ಮೊದಲ ಹಂತದಲ್ಲಿ ನ.1ರಿಂದ ಡಿ.6ರವರೆಗೆ 6 ಜಿಲ್ಲೆಯ 35 ಕ್ಷೇತ್ರಗಳಲ್ಲಿ ಈ ಯಾತ್ರೆ ಸಾಗಲಿದೆ. ಯಾತ್ರೆ ಜೊತೆ ನಿತ್ಯ ಆಯಾ ಕ್ಷೇತ್ರದಲ್ಲಿ ಗ್ರಾಮ ವಾಸ್ತವ್ಯ ಇರಲಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ