Breaking News

ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ: ಎಚ್ಚರಿಕೆಯಿಂದಿರಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.

Spread the love

ಮೂಡಲಗಿ: ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.
ಧರ್ಮಟ್ಟಿ ಗ್ರಾಮದ ಅನಿಲ ಮಂದ್ರೋಳ್ಳಿ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿಕ್ಕೋಡಿ ತಾಲೂಕಿನಿಂದ ಈ ಚಿರತೆ ಬಂದಿರಬಹುದೆಂದು ಅರಣ್ಯ ಇಲಾಖೆಯಿಂದ ತಿಳಿದು ಬಂದಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ತಹಶೀಲದಾರ ಸೇರಿದಂತೆ ಹಲವು ಅಧಿಕಾರಿಗಳು ಧರ್ಮಟ್ಟಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಮುಂಜಾಗೃತ ಕ್ರಮವಾಗಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ

Spread the love ನೂರಾರು ಕಾಯಕ ಪಂಗಡಗಳ ಒಕ್ಕೂಟದಿಂದ ಶ್ರಾವಣ ಮಾಸದ ಪಾದಯಾತ್ರೆ ಹಾಗೂ ಪ್ರವಚನ ಶ್ರಾವಣ ಮಾಸದ ಪವಿತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ