Breaking News
Home / ಜಿಲ್ಲೆ / “ಹೆಣ್ಣೆಂದರೆ ಸ್ಫೂರ್ತಿ, ಹೆಣ್ಣೆಂದರೆ ಕೀರ್ತಿ

“ಹೆಣ್ಣೆಂದರೆ ಸ್ಫೂರ್ತಿ, ಹೆಣ್ಣೆಂದರೆ ಕೀರ್ತಿ

Spread the love

ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ* ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಅಸಾಧಾರಣ 4 ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಿದರು.

ಲಿಂಗ ಅಸಮಾನತೆಯನ್ನು ಹೋಗಲಾಡಿಸಿ ಹೆಣ್ಣಿಗೆ ಸಮಾನ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕೆಂಬ ಉದ್ದೇಶದಿಂದ ಅಲ್ಲದೇ ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಸಮಾನತೆಯಿಂದ ಕಂಡು ಅವರಿಗೂ ಮೌಲ್ಯ, ಗೌರವವನ್ನು ತೋರಿಸುವ ಸಲುವಾಗಿ ಆ ಭಾವನೆ ಜನರಲ್ಲಿ ಮೂಡಿಸಲು ಪ್ರತಿ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳು ಸಮಾಜದಲ್ಲಿ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಲಿಂಗತಾರತಮ್ಯ, ಅನಕ್ಷರತೆ, ಅತ್ಯಾಚಾರ, ಲೈಂಗಿಕ ಕಿರುಕುಳ ಇನ್ನಿತರ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮೂಢನಂಬಿಕೆಗಳನ್ನು ದೂರವಿಟ್ಟು ಆತ್ಮಸ್ಥೈರ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕಾಗಿದೆ. ಹೆಣ್ಣುಮಕ್ಕಳ ರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ, ಸುಕನ್ಯ ಸಮೃದ್ಧಿ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆಗಳಂಥ ಹಲವು ಯೋಜನೆಗಳನ್ನು ಕೈಗೊಂಡಿದೆ. ಹೆಣ್ಣು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ ತಡೆಗೆ ಅನೇಕ ಕಠಿಣ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಶ್ರೀ ಕೆ.ಎ ದಯಾನಂದ ಭಾ.ಆ.ಸೇ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ