Breaking News

ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ಶಶಿಕಲಾ ಜೊಲ್ಲೆ ಜಿ ಯವರು ಭೇಟಿ

Spread the love

ಹರಿಹರ
ಹರಿಹರದ ಹರಿಹರೇಶ್ವರ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ದೇವರ ದರುಶನ ಪಡೆದು, ಅಕ್ಕಮಹಾದೇವಿ ವಚನ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿ, ಮಹಾದೇವಿ ಅಕ್ಕನ ವಚನ ಕಟ್ಟುಗಳನ್ನು ಆನೆ ಅಂಬಾರಿಯಲ್ಲಿರಿಸಿ, ವಚನ ಗ್ರಂಥಗಳನ್ನು ತಲೆಮೇಲಿಟ್ಟುಕೊಂಡು ಅಕ್ಕನ ವಚನಗಳನ್ನು ಸಾಮೂಹಿಕ ಪಠಣದೊಂದಿಗೆ ಧಾರ್ಮಿಕ, ಸಾಮಾಜಿಕ, ಐತಿಹಾಸಿಕ ಸ್ತಬ್ದ ದೃಶ್ಯಗಳು, ಜಾನಪದ ಕಲಾಮೇಳದೊಂದಿಗೆ ಹರಿಹರದ ಹರಿಹರೇಶ್ವರ ದೇವಸ್ಥಾನದಿಂದ ಬೃಹತ್ ಮೆರವಣಿಗೆಯಲ್ಲಿ ಶ್ರೀಕಾಂತ ಟಾಕೀಜ್ ವರೆಗೆ ಸಾಗಿದರು.

ಈ ಕಾರ್ಯಕ್ರಮದಲ್ಲಿ ಹರಿಹರದ ವೀರಶೈವ ಲಿಂಗಾಯತ ಯೋಗ ಸಿಂಹಾಸನಾಧೀಶ್ವರ ಪಂಚಮಸಾಲಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು ಹಾಗೂ ನಟಿ ರಾಗಿಣಿ ದ್ವಿವೇದಿ, ಶಾಸಕರಾದ ಅರುಣ್ ಕುಮಾರ ಪೂಜಾರ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ