Breaking News
Home / ಜಿಲ್ಲೆ / ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 “

ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 “

Spread the love

ಬನವಾಸಿ
” ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 ”

ಉತ್ತರ ಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯುತ್ತಿರುವ ಕದಂಬೋತ್ಸವ-೨೦೨೦ ಕಾರ್ಯಕ್ರಮದ ಅಂಗವಾಗಿ ಪ್ರಚಾರದ ನಿಮಿತ್ತ ಕದಂಬೋತ್ಸವದ ಪೂರ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಗಳಲ್ಲೂ ಸಂಚರಿಸಿ ಬನವಾಸಿಗೆ ಆಗಮಿಸಿದ ಕದಂಬ ಜ್ಯೋತಿಯನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸ್ವಾಗತಿಸಿ, ಶ್ರೀ ಮಧುಕೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ನಂತರ ನಡೆದ ಮೆರವಣಿಗೆಯನ್ನು ಕುಂಭ ಹೊರುವುದರ ಮೂಲಕ ಚಾಲನೆ ನೀಡಿದರು.

ಶಾಲಾ ವಿದ್ಯಾರ್ಥಿಗಳಿಂದ ನಯನಮನೋಹರ ಕುಂಭ ಮೇಳ ಹಾಗೂ ಆಕರ್ಷಕ ಪಥಸಂಚಲನ :

ಭಾರತ ಸೇವಾದಳ, ಸ್ಕೌಟ್ ಮತ್ತು ಗೈಡ್ಸ್ ಸಮವಸ್ತ್ರದೊಂದಿಗೆ ಆಕರ್ಷಕ ಪಥಸಂಚಲನ, ಅತ್ಯಾಕರ್ಷಕ ವಾದ್ಯ ತಂಡದೊಂದಿಗೆ ಮೆರವಣಿಗೆಯನ್ನು ಪ್ರಾರಂಭಿಸಿ, ಮೆರವಣಿಗೆ ಮಧುಕೇಶ್ವರ ದೇವಸ್ಥಾನ ಮುಖ್ಯ ದ್ವಾರದಿಂದ ಪ್ರಾರಂಭಗೊಂಡು ಮಾರಿಹೊಕ್ಕುಲು ಮೈದಾನದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಹಳಿಯಾಳ ತಂಡದಿಂದ ಸಿದ್ಧರ ಕುಣಿತ, ಯಲ್ಲಾಪುರ ತಂಡದಿಂದ ಗೌಳಿ ನೃತ್ಯ, ಶಿರಸಿ ತಂಡದ ಬೇಡರ ನೃತ್ಯ, ಹೊನ್ನಾವರದ ಹಗಣ ನೃತ್ಯ, ಗದಗ ಜಿಲ್ಲೆಯ ಜಾನಪದ ಕಲಾಮೇಳ ಸೇರಿದಂತೆ ಇನ್ನೂ ಅನೇಕ ಕಲಾ ತಂಡಗಳು ಅಮೋಘ ಆಕರ್ಷಣೆ ನೀಡಿದವು.


Spread the love

About Laxminews 24x7

Check Also

ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ;ಜೋಶಿ

Spread the loveಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ