Breaking News

ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸುಖಿ.ವಿ, ಬೀದಿ ನಾಟಕದ ಮೂಲಕ ಸ್ವಚ್ಚತೆಯ ಅರಿವು ಮೂಡಿಸಿದ ಬಿ.ಆರ್.ಪ್ರತ್ಯಕ್ಷಾ ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಲಾಯಿತು.

Spread the love

 

ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸುಖಿ.ವಿ, ಬೀದಿ ನಾಟಕದ ಮೂಲಕ ಸ್ವಚ್ಚತೆಯ ಅರಿವು ಮೂಡಿಸಿದ ಬಿ.ಆರ್.ಪ್ರತ್ಯಕ್ಷಾ ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಲಾಯಿತು.
ಇದೇ ವೇಳೆ ಇಲಾಖೆಯ ಬಾಲ ಮಂದಿರದಲ್ಲಿ ಬೆಳೆದು ಸಧ್ಯ ರಾಜ್ಯ ಮಹಿಳಾ ನಿಲಯದಲ್ಲಿ ಪುನರ್ ವಸತಿ ಪಡೆದು ಶಿಕ್ಷಣ ಮುಂದುವರೆಸಿದ ೧೧ ಯುವತಿಯರಿಗೆ ವಾಹನ ಚಾಲನಾ ಪರವಾನಿಗೆ ವಿತರಿಸಿದ್ದು ಸಂತಸ ತಂದಿತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಶ್ರೀ ಕೆ.ಎ ದಯಾನಂದ , ಬಿಎಂಸಿಟಿಸಿ ವ್ಯವಸ್ಥಾಪಕ ನಿರ್ದೇಶಕ ದೇವರಾಜ, ಬಾಲಭವನದ ಅಧ್ಯಕ್ಷೆ ಚಿಕ್ಕಮ್ಮ ಬಸವರಾಜ, ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ವಸುಂದರಾ ದೇವಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

Spread the love ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ