ನಮ್ಮ ರಾಜ್ಯದ ಹೆಮ್ಮೆಯ ಶಿಕ್ಷಣ ಸಂಸ್ಥೆ ಕರ್ನಾಟಕ ಲಿಂಗಾಯತ ಸಂಸ್ಥೆ ( ಕೆಎಲ್ಇ) ಗೆ ಅವಿರೋಧವಾಗಿ 4 ನೇ ಬಾರಿಗೆ ಆಯ್ಕೆ ಆಗುವ ಮೂಲಕ ಕಾರ್ಯಧ್ಯಕ್ಷ ಸ್ಥಾನ ಅಲಂಕರಿಸಿರುವ ಶ್ರೀ ಡಾ.ಪ್ರಭಾಕರ ಕೋರೆ ಜಿ ಯವರನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ಮಾಡಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.
ಡಾ. ಪ್ರಭಾಕರ ಕೋರೆಯವರು ಸಾಮಾಜಿಕ ಕಳಕಳಿಯೊಂದಿಗೆ ಕೌಶಲ್ಯ ಮೈಗೂಡಿಸಿಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಕೆ.ಎಲ್.ಇ ಕಾರ್ಯಾಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಬೆರಗು ಮೂಡಿಸುವಂತದ್ದು. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ಕೃಷಿ ಮಾಡಿರುವ ಇವರನ್ನು ಹಲವಾರು ಪ್ರಶಸ್ತಿಗಳು ಅರಸಿಕೊಂಡು ಬಂದಿವೆ. ಇನ್ನಷ್ಟೂ ಪ್ರಶಸ್ತಿಗಳು ಅವರದಾಗಲಿ ಎಂದು ಶುಭ ಹಾರೈಸಿದರು.