ಚಿಕ್ಕೋಡಿ
“ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ”ಬೆಂಗಳೂರಿನಲ್ಲಿ ನಡೆದ ವಿಧಾನ ಸಭೆಯ ಅಧಿವೇಶನ ಮುಗಿಸಿ ಬಂದ ತಕ್ಷಣ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವೈರಾಣು ಹರಡುವುದನ್ನು ತಪ್ಪಿಸುವ ಸಲುವಾಗಿ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಸಭೆ ಉದ್ದೇಶಿಸಿ ಮಾತನಾಡಿದರು.
ಕೊರೋನಾ ಜಾಗತಿಕ ಮಹಾಮಾರಿ ಆಗಿದ್ದು, ವೈರಸ್ ಬಗ್ಗೆ ಭಯ ಪಡದೆ ನಿಗಾ ವಹಿಸಬೇಕು. ಅಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯ ಅರಿವು ಮೂಡಿಸಿ, ಕೊರೋನಾ ಹರಡದಂತೆ ನೋಡಿಕೊಳ್ಳಬೇಕು. ಜೊತೆಗೆ ಚಿಕ್ಕೋಡಿಯಲ್ಲಿ ಶ್ರೀಘ್ರವಾಗಿ ಕೊರೋನಾ ಟೆಸ್ಟ್ ಲ್ಯಾಬ್ ತೆರೆಯಲಾಗುವುದು.ಜೊತೆಗೆ ಕೊರೋನಾ ವಿರುದ್ಧ ಹೋರಾಡುತ್ತಿರುವ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕರಾದ ಶ್ರೀ ಮಹಾಂತೇಶ ಕವಟಗಿಮಠ, ಉಪವಿಭಾಗಾಧಿಕಾರಿ ಶ್ರೀ ರವಿಂದ್ರ ಕರಲಿಂಗಣ್ಣವರ, ತಾಲೂಕ ವೈಧ್ಯಾದಿಕಾರಿಗಳಾದ ಶ್ರೀ ಡಾ. ವಿಠ್ಠಲ ಶಿಂಧೆ, ಡಿವೈಎಸ್ ಪಿ ಶ್ರೀ ಮನೋಜಕುಮಾರ ನಾಯಕ, ಹಾಗೂ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.