Breaking News
Home / ಜಿಲ್ಲೆ / ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮ

Spread the love

ಬೆಳಗಾವಿ
ಬೆಳಗಾವಿಯ ಕಾಲೇಜು ರಸ್ತೆಯ ಮಹಾತ್ಮಾ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘ, ಎನ್.ಜಿ.ಓ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ಸಮ್ಮೇಳನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಹಾಗೂ ಅವರೆಲ್ಲಾ ಪ್ರೀತಿಯಿಂದ ಮಾಡಿದ ಸನ್ಮಾನವನ್ನು ಸ್ವೀಕರಿಸಿದರು.

”ಹೊಸ ಚಿಗುರು ಹಳೇ ಬೇರು, ಸೇರಿರಲು ಮರ ಸೊಬಗು” ಎಂಬ ಕವಿವಾಣಿಯಂತೆ ಹಿರಿಯರ ಅನಿಸಿಕೆಗಳನ್ನು ಕಿರಿಯರು ಗೌರವಿಸಿ ಅವುಗಳು ಸರಿಕಂಡಲ್ಲಿ ಸ್ವೀಕರಿಸಿ, ಒಪ್ಪಿಗೆಯಾಗದಿದ್ದರೆ ಪ್ರೀತಿಯಿಂದ ಮತ್ತು ಸಹನೆಯಿಂದ ವಿವರಿಸಿ, ಅವರ ಮನಸ್ಸನ್ನು ಗೆದ್ದಾಗ ವೃದ್ಧರ ಬಾಳು ಹಸನಾಗುತ್ತದೆ. ಹಿರಿಯ ನಾಗರಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚೆ ನಡೆಸಿ, ಹಿರಿಯ ನಾಗರಿಕರು ತಿಳಿಸಿದ ಸಮಸ್ಯೆಗಳ ಪರಿಹಾರಕ್ಕೆ ಸರಕಾರದಿಂದ ಸೂಕ್ತವಾಗಿ ಸ್ಪಂದಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಹಿರಿಯರ ಅನುಭವ ಹಾಗೂ ಸರಕಾರದ ಯೋಜನೆಗಳನ್ನು ಬಳಸಿಕೊಂಡು ಸದೃಢ ಸಮಾಜ ಕಟ್ಟೋಣ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕಾರಂಜಿಮಠದ ಶ್ರೀ ಮ.ನಿ.ಪ್ರ ಗುರುಸಿದ್ಧ ಮಹಾಸ್ವಾಮಿಗಳು, ನಾಗನೂರು ರುದ್ರಾಕ್ಷಿ ಮಠದ ಶ್ರೀ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಶಂಕರಗೌಡ ಪಾಟೀಲ, ಕ.ರಾ.ಹಿ.ನಾ ಸಂಘದ ಶ್ರೀ ಅಡಿವೆಪ್ಪ ಯ.ಬೆಂಡಿಗೇರಿ, ರಾಜ್ಯ ಮಟ್ಟದ ಸಮ್ಮೇಳ ಸಮಿತಿ ಅಧ್ಯಕ್ಷರಾದ ಶ್ರೀ ಎಸ್.ಜಿ‌.ಸಿದ್ನಾಳ, ಜಿಲ್ಲಾಘಟಕದ ಅಧ್ಯಕ್ಷರಾದ ಶ್ರೀ ಬಸವರಾಜ ಎಂ.ಗೋಮಾಡಿ, ಸಂಘದ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಮಲ್ಲಪ್ಪ ಮುದಕವಿ,ಶ್ರೀ ಜಗದೀಶ ಪಾಟೀಲ, ಶ್ರೀ ಪ್ರಭಾಕರ ಕುಲಕರ್ಣಿ, ಶ್ರೀ ಅರುಣ ಹಾಗೂ ಮುಖಂಡರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Spread the love ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ