Breaking News

ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

Spread the love

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ.

ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ.

ಬೆಳಗಾವಿ: ಕೊರೋನಾ ಟೆಸ್ಟ್‌ ಮಾಡಿಸದೇ ಪಾಸಿಟಿವ್‌ ಇದೆ ಎಂದಿದ್ದ ಜಿಲ್ಲಾಡಳಿತ

ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಮಹಾಂತೇಶ ಕೌಜಲಗಿ ಅವರು, ಜು.16 ರಂದು ಬೈಲಹೊಂಗಲ ತಾಲೂಕು ಮಟ್ಟದ ಕೋವಿಡ್‌ 19 ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಕಿತ್ತೂರು ವಿಧಾನಸಭೆ ಕ್ಷೇತ್ರದ ಕೆಲ ಹಳ್ಳಿಗಳು ಬೈಲಹೊಂಗಲ ತಾಲೂಕಿನ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.

ಶಾಸಕರಾದ ಕೌಜಲಗಿ ಮತ್ತು ದೊಡ್ಡಗೌಡರ ಅವರು ಅಕ್ಕಪಕ್ಕದಲ್ಲಿಯೇ ಕುಳಿತ್ತಿದ್ದರು. ಅಲ್ಲದೇ, ಮಾಸ್ಕ್‌ ಅನ್ನು ಸರಿಯಾಗಿ ಹಾಕದೇ ಅಧಿಕಾರಿಗಳ ಸಭೆ ನಡೆಸಿದ್ದರು. ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಮಟ್ಟದ ಅಧಿಕಾರಿಗಳು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಶಾಸಕ ಕೌಜಲಗಿ ಅವರಿಗೆ ಕೊರೋನಾ ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಕ್ವಾರಂಟೈನ್‌ಗೊಳಗಾಗಬೇಕಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ