Breaking News
Home / ಜಿಲ್ಲೆ / “ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ “

“ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ “

Spread the love

ಬೆಳಗಾವಿ – ಶಾಸಕ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಂಗಳವಾರ  ವಿವಿಧೆಡೆ ಸುತ್ತಾಡಿ ಕೊರೋನಾ ಸಂಬಂಧ ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಿದರು.

ಕಡೋಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಡೋಲಿ, ಕೇದನೂರು, ಬಂಬರ್ಗಾ, ಹಂದಿಗನೂರು, ಅಗಸಗಿ ಗ್ರಾಮ ಪಂಚಾಯಿತಿಗಳಿಗೆ ಜಾರಕಿಹೊಳಿ ಭೇಟಿ ನೀಡಿದ್ದರು.

ಸ್ಥಳೀಯ ಆಸ್ಪತ್ರೆ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ಭೇಟಿ ನೀಡಿ, ಕೊರೋನಾ ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕೆಗಳನ್ನು ವಿಚಾರಿಸಿದರು. ವೈದ್ಯರು ಹಾಗೂ ಗ್ರಾಮಪಂಚಾಯಿತಿ ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು.

ಹಾಗೆಯೇ ಸಾರ್ವಜನಿಕರನ್ನು ಸಹ ಭೇಟಿ ಮಾಡಿ ಮನೆಯಲ್ಲೇ ಇದ್ದು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಅನಗತ್ಯವಾಗಿ ತಿರುಗಾಡಬಾರದು ಎಂದು ಸಲಹೆ ನೀಡಿದರು.

ಜಾರಕಿಹೊಳಿ ಕಳೆದ ಕೆಲವು ದಿನಗಳಿಂದ ಕ್ಷೇತ್ರದ ವಿವಿಧೆಡೆ ಜನರಿಗೆ ಮಾಸ್ಕ್ ಗಳನ್ನೂ ವಿತರಿಸಿದರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಗೆಬಸವರಾಜ ಬೊಮ್ಮಾಯಿ

Spread the loveಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ ಬೆಂಗಳೂರಿನಿಂದ ಕಲಬುರ್ಗಿಗೆ ತೆರಳುವು ಬೊಮ್ಮಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ