Breaking News

ಕಾಡುಗೋಡಿ ಬಾಲಕಿ ಕೊಲೆ ಕೇಸ್ – ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು

Spread the love

ಬೆಂಗಳೂರು: ಕಾಡುಗೋಡಿಯಲ್ಲಿ  ಮಗಳು ವೆನ್ನೀಲಾ ಕೊಲೆ ಪ್ರಕರಣ ಸಂಬಂಧ ಆರೋಪಿ ತಾಯಿ ಪ್ರಿಯಾಂಕಾಗೆ ಬೆಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಆರೋಪಿ ಪ್ರಿಯಾಂಕಾ ಪರ ವಕೀಲ ಪ್ರಸನ್ನ, ಕೊಲೆಯಲ್ಲಿ ತಾಯಿ ನೇರವಾಗಿ ಭಾಗಿಯಾಗಿಲ್ಲ ಎಂದು ವಾದ ಮಂಡಿಸಿದರು. ಇದರ ಆಧಾರದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಾ.24ರಂದು ಮಗು ವೆನ್ನೀಲಾ ಶವವಾಗಿ ಪತ್ತೆಯಾಗಿತ್ತು. ಪ್ರಕರಣದಲ್ಲಿ ಮಗುವಿನ ತಾಯಿ ಪ್ರಿಯಾಂಕಾ, ಪ್ರಿಯಕರ ಮೋಹನ್‌ನನ್ನು ಬಂಧನ ಮಾಡಲಾಗಿತ್ತು. ಜೂನ್ 11ರಂದು ಪ್ರಿಯಾಂಕಾಳನ್ನ ಬಂಧಿಸಿದ್ದ ಪೊಲೀಸರು ವಿಚಾರಣೆ ನಡೆಸಿ ಜೈಲಿಗೆ ಕಳಿಸಿದ್ದರು.

ಏನಿದು ಪ್ರಕರಣ?
ಬೆಂಗಳೂರು ಮೂಲದ ಪ್ರಿಯಾಂಕಾ ಹಾಗೂ ದಾವಣಗೆರೆಯ  ಪ್ರವೀಣ್ 2007ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ರು. ಎಲ್ಲವೂ ಅನ್ಯೋನ್ಯವಾಗಿತ್ತು. ದಂಪತಿಗೆ 17 ವರ್ಷದ ಹಾಗೂ 5 ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದರು. ಈ ನಡುವೆ ಕೆಲ ವರ್ಷಗಳ ಹಿಂದೆ ಪ್ರಿಯಾಂಕಾಳಿಗೆ ತನ್ನ ಕಾಲೇಜು ಗೆಳೆಯ ಮೋಹನ್ ಸಿಕ್ಕಿದ್ದ. ಇಬ್ಬರ ನಡುವೆ ಹೆಚ್ಚು ಸಲುಗೆ ಬೆಳೆದು ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಈ ವಿಷಯ ಪ್ರಿಯಾಂಕಾ ಪತಿ ಪ್ರವೀಣ್ ಕಿವಿಗೆ ಬಿದ್ದಿದೆ. ಈ ಬಗ್ಗೆ ಪತಿ ಪ್ರಶ್ನಿಸಿದಾಗ ಪ್ರಿಯಾಂಕಾ ತನಗೆ ಡಿವೋರ್ಸ್ ಕೊಡುವಂತೆ ಪ್ರವೀಣ್‌ಗೆ ಪಟ್ಟು ಹಿಡಿದಿದ್ದಳು. ಕಳ್ಳಸಂಬಂಧ ಹೊಂದಿದ್ದ ಪ್ರಿಯಾಂಕಾ ತನ್ನ ಪ್ರಿಯಕರನ ಜೊತೆ ಸೇರಿ ತಾನು ಹೆತ್ತ ಮಗುವನ್ನೇ ಕೊಲೆಗೈದು ವಿಕೃತಿ ಮೆರೆದಿದ್ದಾಳೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ