ಬೆಳಗಾವಿ: ನಗರದ ವಡಗಾವಿಯಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರ ಸಿದ್ದಲಿಂಗೇಶ್ವರ ಗಂಗಪ್ಪ ಹೊರಕೇರಿ ಅವರ ಮನೆಗೆ ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕುಟುಂಬದವರಿಗೆ ತಮ್ಮ ‘ಶ್ರೀಮಂತ ಪಾಟೀಲ ಪ್ರತಿಷ್ಠಾನ’ದಿಂದ ಆರ್ಥಿಕ ನೆರವು ನೀಡಿದರು. ಆದಷ್ಟು ಬೇಗ ಇಲಾಖೆಯಿಂದಲೂ ನೆರವು ಕೊಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯರು ಇದ್ದರು.
Laxmi News 24×7