ಪಾಟ್ನಾ: ಬಿಹಾರದಲ್ಲಿ ನಡೆದ ಅಪ್ರಾಪ್ತ ಬಾಲಕಿ ಮತ್ತು ಬಾಲಕನ ಮೇಲಿನ ಹಲ್ಲೆ ಹಾಗೂ ಲೈಂಗಿಕ ಕಿರುಕುಳದ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19 ರಂದು ಬಿಹಾರದ ಜಮುಯಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.
10ನೇ ತರಗತಿಯ ಅಪ್ರಾಪ್ತ ಜೋಡಿ ಕೋಚಿಂಗ್ ಕ್ಲಾಸ್ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದಾಗ, ಪುಂಡರ ಗುಂಪೊಂದು ಅವರನ್ನು ರಸ್ತೆಯಲ್ಲೇ ತಡೆದಿದೆ.
ಗುಂಪು ಬಾಲಕನ ಮೇಲೆ ಹಲ್ಲೆ ನಡೆಸಿ, ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದೆ. ಬಾಲಕಿ ಕೈಮುಗಿದು ಬಿಡುವಂತೆ ಬೇಡಿಕೊಂಡರೂ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಬಲವಂತವಾಗಿ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ವಿಡಿಯೋ ವೈರಲ್ ಆಗಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಜಮುಯಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಡಿಯೋ ಆಧಾರದ ಮೇಲೆ ಘಟನೆಯಲ್ಲಿ ಭಾಗಿಯಾದ ಸುಮಾರು 7 ಜನ ಪುಂಡರನ್ನು ಪೊಲೀಸರು ಗುರುತಿಸಿದ್ದಾರೆ. ಉಳಿದ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
Laxmi News 24×7