ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯೊಂದು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.
ಗ್ರಾಮದ ನಿವಾಸಿ ಪರಮಶಿವಯ್ಯ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ತಡರಾತ್ರಿ ದಿಢೀರನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳು ಹಾಗೂ ದಿನಬಳಕೆಯ ಸಾಮಗ್ರಿಗಳು ಸಂಪೂರ್ಣವಾಗಿ ನಾಶವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7