Breaking News

ಸರ್ಕಾರ ನಿರ್ಮಿಸಿದ್ದ ಕನ್ನಡ ಭವನ ಖಾಸಗಿ ಸಂಸ್ಥೆಗೆ ಹಸ್ತಾಂತರ!

Spread the love

ಬೆಳಗಾವಿ : ಸರ್ಕಾರದ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಂಡ ಬೆಳಗಾವಿಯ ಕನ್ನಡ ಭವನವನ್ನು ಖಾಸಗಿ ಸಂಘಕ್ಕೆ ಹಸ್ತಾಂತರಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರಿಗೆ ರಾಜ್ಯ ಕಸಾಪ ನೋಟೀಸ್ ಜಾರಿ ಮಾಡಿದೆ.

ಬೆಳಗಾವಿಯ ಒಂಬತ್ತು ಕನ್ನಡಪರ ಸಂಘಟನೆಗಳು ನೀಡಿದ ದೂರಿನ ಮೇರೆಗೆ ರಾಜ್ಯ ಕಸಾಪ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ. ಸುಮಾರು ₹5 ಕೋಟಿ ವೆಚ್ಚದ ಈ ಭವನವನ್ನು ನಿಯಮಬಾಹಿರವಾಗಿ ಖಾಸಗಿ ಸಂಸ್ಥೆಯೊಂದಕ್ಕೆ ವಹಿಸಿಕೊಟ್ಟಿರುವುದರಿಂದ ಪರಿಷತ್ತಿಗೆ ತಿಂಗಳಿಗೆ ಅಂದಾಜು ₹2 ಲಕ್ಷ ಬಾಡಿಗೆ ಆದಾಯ ನಷ್ಟವಾಗುತ್ತಿದೆ ಎಂದು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆ ನಡೆಸಿರುವ ಹಿನ್ನೆಲೆಯಲ್ಲಿ, “ನಿಮ್ಮ ವಿರುದ್ಧ ಯಾಕೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬಾರದು?” ಎಂದು ಪ್ರಶ್ನಿಸಲಾಗಿದೆ. ಈ ಕುರಿತು ಏಳು ದಿನಗಳ ಒಳಗಾಗಿ ಸೂಕ್ತ ಸಮರ್ಥನೆ ನೀಡದಿದ್ದರೆ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ರಾಜ್ಯ ಕಸಾಪ ತೀವ್ರ ಎಚ್ಚರಿಕೆ ನೀಡಿದೆ


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ