Breaking News

ದುಬೈನಲ್ಲಿ ಸಿಲುಕಿರುವ ಪ್ರವಾಸಿಗರಿಗೆ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ನೆರವು

Spread the love

ಬೆಂಗಳೂರು: ದುಬೈನಲ್ಲಿ ಸಿಲುಕಿರುವ ಕನ್ನಡಿಗರ  ಸುರಕ್ಷತೆಗೆ ಆದ್ಯತೆ ನೀಡಿರುವ `ಕನ್ನಡಿಗಾಸ್ ಹೆಲ್ಪ್‌ಲೈನ್‌’  ತಂಡ ಪ್ರವಾಸಿಗರಲ್ಲಿ ಆತ್ಮವಿಶ್ವಾಸ ತುಂಬಿದೆ.

ಹೌದು, ಇರಾನ್-ಇಸ್ರೇಲ್ ಯುದ್ಧದಿಂದಾಗಿ  ಉದ್ವಿಗ್ನತೆ ಹೆಚ್ಚಾಗಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ದುಬೈನಲ್ಲಿ ಸಿಲುಕಿಕೊಂಡು ತವರಿಗೆ ಮರಳಲಾಗದೇ ಸಂಕಷ್ಟದಲ್ಲಿದ್ದಾರೆ. ಅಂಥವರ ನೆರವಿಗೆ ಅನಿವಾಸಿ ಕನ್ನಡಿಗ ಪೋಷಕರಾದ ರೊನಾಲ್ಡ್ ಕೊಲಸೊ ನೇತೃತ್ವದ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ತಂಡ ಧಾವಿಸಿದೆ.

ಯುಎಇಯಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಕನ್ನಡಿಗಾಸ್ ಹೆಲ್ಪ್‌ಲೈನ್‌ ಸಹಾಯಹಸ್ತ ಚಾಚಿದ್ದು, ಕನ್ನಡಿಗರ ಮಾಹಿತಿ ಸಂಗ್ರಹಿಸಿ ತುರ್ತು ಸಹಾಯಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದೆ. ಪ್ರವಾಸಿಗರ ತುರ್ತು ವೆಚ್ಚ ಭರಿಸಲು ಸಹ ಸಿದ್ಧತೆ ನಡೆಸಿದೆ. ವೈದ್ಯಕೀಯ ಸೇವೆಗಾಗಿ ಸಹ ಕನ್ನಡಿಗಾಸ್ ಹೆಲ್ಪ್‌ಲೈನ್‌ ಸಂಪರ್ಕಿಸುವಂತೆ ಮನವಿ ಮಾಡಿಕೊಂಡಿದೆ. ದುಬೈ, ಶಾರ್ಜಾ, ಅಬುಧಾಬಿ, ಅಜ್ಮಾನ್ ಎಲ್ಲೇ ಇದ್ದರೂ ಕನ್ನಡಿಗಾಸ್ ಹೆಲ್ಪ್‌ಲೈನ್‌ ಸಂಪರ್ಕಿಸುವಂತೆ ತಿಳಿಸಿದೆ.

ರೊನಾಲ್ಡ್ ಕೊಲಸೊ ಅವರು ಮಾತನಾಡಿ, ಯುಎಇ ಅತ್ಯಂತ ಸುರಕ್ಷಿತ ದೇಶ, ಪರಿಸ್ಥಿತಿ ಶೀಘ್ರದಲ್ಲೇ ಮೊದಲಿನಂತೆ ಆಗುತ್ತದೆ. ಎಲ್ಲರೂ ಯುಎಇ ಸರ್ಕಾರದ ಮಾರ್ಗದರ್ಶನ ಪಾಲಿಸಿ ಸಹಕರಿಸಬೇಕು ಎಂದ ಅವರು, ಈಗ ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ತುರ್ತು ವ್ಯವಸ್ಥೆಯನ್ನು ಕಲ್ಪಿಸಬೇಕಿದೆ. ಇದಕ್ಕೆ ಬೇಕಾದ ವೆಚ್ಚವನ್ನು ಭರಿಸಲು ನಾನು ತಯಾರಿದ್ದೇನೆ. ಅದೇ ರೀತಿ ಕರ್ನಾಟಕ ಸರ್ಕಾರ ತುರ್ತು ಪರಿಹಾರ ಸಹಾಯಧನ ಘೋಷಣೆ ಮಾಡಲು ಒತ್ತಾಯಿಸುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಮಾರ್ಚ್ 3 ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!

Spread the loveಬೆಂಗಳೂರು: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ ಹಿನ್ನೆಲೆ ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ