Breaking News

ನಕಲಿ ಔಷಧ ವಿರುದ್ಧ ಬೆಳಗಾವಿಯಲ್ಲಿ ಕರವೇ ಆಕ್ರೋಶ

Spread the love

ಬೆಳಗಾವಿ: ರಾಜ್ಯಾದ್ಯಂತ ನಕಲಿ ಔಷಧಗಳ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ, ಬೆಳಗಾವಿಯಲ್ಲೂ ನಕಲಿ ಔಷಧ ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ವಿವಾ ಫಾರ್ಮಾ ಕಚೇರಿ ಮುಂದೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ನಕಲಿ ಔಷಧಗಳ ಮಾರಾಟ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಪರಿಶೀಲನೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜನರ ಆರೋಗ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ನಕಲಿ ಔಷಧ ಮಾರಾಟದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೆಡಿಕಲ್ ಶಾಪ್‌ಗಳಲ್ಲಿ ಮಾರಾಟವಾಗುತ್ತಿರುವ ಔಷಧಗಳ ಗುಣಮಟ್ಟ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಅಕ್ರಮ ಕಂಡುಬಂದಲ್ಲಿ ಪರವಾನಗಿ ರದ್ದುಪಡಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ನಕಲಿ ಔಷಧ ಮಾರಾಟಕ್ಕೆ ಕಡಿವಾಣ ಹಾಕಿ, ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.

ಜಿಲ್ಲಾ ಅಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೋಕಡೆ, ಹೊಳೆಪ್ಪಾ ಸುಳದಾಳ, ಅಡಿವೆಪ್ಪ ತಲ್ಲೂರಿ, ಬಾಳು ಜಡಗಿ, ಲಗಮಣ್ಣ ಮಾಲಂಗಿ, ರಮೇಶ್ ಯರಗನ್ನವರ, ಉದಯ ಚಿಕ್ಕನ್ನವರ, ಸತೀಶ್ ಗುಡದವರ, ಮಂಜುನಾಥ್ ರಾಥೋಡ, ಲೋಕೇಶ್ ರಾಥೋಡ, ವಿನಾಯಕ ಬೋವಿ, ಅರ್ಜುನ್ ಕಾಂಬಳೆ, ಬಸವರಾಜ ಹಳೆಮನಿ,
ಇಸ್ಮಾಯಿಲ್ ಮುಲ್ಲಾ, ಅಭಿಷೇಕ್ ಅಗಸಗಿ, ನಾಗರಾಜ ಲಕ್ಕಪ್ಪಗೋಳ, ಶ್ರೀಧರ್ ಹೊಳೆನವರ್, ಸಂತೋಷ ಚಕ್ರಯಿ, ಶಾಂತಾ ಹಣಬರ, ರೇಖಾ ಲೋಕರಿ, ಮಧು ಇಟಗಿ, ರೂಪಾಲಿ ಬಾರಿಗಡ್ಡಿ, ಗೀತಾ ಕಾಂಬಳೆ, ಬಸವರಾಜ ಮಾಳಗಿ, ಉದಯ ಯಮನಪ್ಪನವರ, ದರ್ಶನ ಜಾಧವ ಮೊದಲಾದವರು ಇದ್ದರು.


Spread the love

About Laxminews 24x7

Check Also

ನಾಲೆಯಲ್ಲಿ ನವವಿವಾಹಿತೆ ಕಣ್ಮರೆ – ಪತಿ ವಿರುದ್ಧ ಕೊಲೆ ಆರೋಪ

Spread the loveಹಾಸನ: ನಾಲೆಯಲ್ಲಿ ನವವಿವಾಹಿತೆ ಕಣ್ಮರೆಯಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿನಡೆದಿದೆ. ಜಯಶೀಲಾ.ಬಿ.ಕೆ (ಪ್ರಿಯಾಂಕ 24) ಅನುಮಾನಾಸ್ಪದವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ