Breaking News

ಬೆಳಗಾವಿ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡದಂತೆ ಕರವೇ ಪ್ರತಿಭಟನೆ

Spread the love

ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರ ವರ್ಗಾವಣೆ ತಡೆಹಿಡಿಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪ್ರತಿಭಟಿಸಿದರು.

ಸೋಮವಾರ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಯಾವುದೇ ಕಾರಣಕ್ಕೂ ಬೆಳಗಾವಿ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ಕಳೆದ ಎರಡ್ಮೂರು ದಿನಗಳ ಹಿಂದಷ್ಟೇ ಬೆಳಗಾವಿ ಕಮಿಷನರ್ ಭೂಷಣ್ ಬೋರಸೆ ಹುಬ್ಬಳ್ಳಿ- ಧಾರವಾಡ ಕಮಿಷನರ್ ಆಗಿ ವರ್ಗಾವಣೆ ಮಡಲಾಗಿದೆ.‌ ಸರ್ಕಾರ ತನ್ನ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು. ಕಮೀಷನರ್ ಅವರು ಬೆಳಗಾವಿಯಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ.

ಗಡಿಭಾಗದ ಜಿಲ್ಲೆ ಬೆಳಗಾವಿ ಸೂಕ್ಷ್ಮ ಪ್ರದೇಶವಾದರೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿದ್ದಾರೆ. ಆದ್ದರಿಂದ ಅವರ ವರ್ಗಾವಣೆ ರದ್ದು ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ