ಬೆಂಗಳೂರು: ಕರ್ನಾಟಕ(Karnataka) ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸಿ, ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 1.3 ಕೋಟಿ ಮತದಾರರಿದ್ದಾರೆ. ಆದರೆ ಇದುವರೆಗೆ ಕೇವಲ 47.97 ಲಕ್ಷ ಜನ ಮಾತ್ರ ಅರ್ಜಿ ವಾಪಸ್ ಕೊಟ್ಟಿದ್ದಾರೆ. ಬರೋಬ್ಬರಿ 39.38 ಲಕ್ಷ (ಸುಮಾರು 40%) ಮತದಾರರ ಸುಳಿವೇ ಸಿಕ್ಕಿಲ್ಲ. ಇನ್ನೂ 16.57 ಲಕ್ಷ ಮತದಾರರು ಅರ್ಜಿ ವಾಪಸ್ ನೀಡಬೇಕಿದೆ ಎಂದು ಹೇಳಿದರು.
ಕೈಬಿಡಲಾಗುವ 84.31 ಲಕ್ಷ ಮಂದಿ ಯಾರು?
ಶಾಶ್ವತವಾಗಿ ಸ್ಥಳಾಂತರಗೊಂಡವರು: 51,74,968
ಮೃತಪಟ್ಟವರು: 14,99,799
ನಾಪತ್ತೆಯಾಗಿರುವವರು: 11,61,231
ನಕಲಿ/ಎರಡು ಕಡೆ ಮತ ಇರುವವರು: 5,62,572
ಇತರರು (ಸಹಿ ಮಾಡಲು ನಿರಾಕರಿಸಿದವರು): 33,042
Laxmi News 24×7