Breaking News

ಕರ್ನಾಟಕದಲ್ಲಿ ಹೊಸದಾಗಿ 264 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು

Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 121 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,245 ಕ್ಕೆ ಏರಿಕೆಯಾಗಿದೆ. 12,49,245 ಸೋಂಕಿತರ ಪೈಕಿ 12,26,303 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,209 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,732 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 121, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9, ಚಿತ್ರದುರ್ಗ 0, ದಕ್ಷಿಣ ಕನ್ನಡ 34, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 16, ಹಾವೇರಿ 1, ಕಲಬುರಗಿ 1, ಕೊಡಗು 12, ಕೋಲಾರ 7, ಕೊಪ್ಪಳ 0, ಮಂಡ್ಯ 7, ಮೈಸೂರು 21, ರಾಯಚೂರು 1, ರಾಮನಗರ 2, ಶಿವಮೊಗ್ಗ 5, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಗದಗ, ಮೈಸೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ಉಡುಪಿ, ದಾವಣಗೆರೆ, ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಗಣನೀಯ ಪ್ರಮಾದಲ್ಲಿ ಇಳಿಕೆ ಕಂಡಿದೆ. ರಾಜ್ಯದ ಕೆಲವಷ್ಟು ಜಿಲ್ಲೆಗಳಲ್ಲಿ ಸೊನ್ನೆ ಕೊವಿಡ್ ಪ್ರಕರಣಗಳು ವರದಿ ಆಗಿವೆ.

 


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ