Breaking News
Home / Uncategorized / ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 17) ಹೊಸದಾಗಿ 1,003 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,573 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 310 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,42,950 ಕ್ಕೆ ಏರಿಕೆಯಾಗಿದೆ. 12,42,950 ಸೋಂಕಿತರ ಪೈಕಿ 12,19,417 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,076 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,456 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 310, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 37, ಚಿತ್ರದುರ್ಗ 10, ದಕ್ಷಿಣ ಕನ್ನಡ 124, ದಾವಣಗೆರೆ 3, ಧಾರವಾಡ 9, ಗದಗ 1, ಹಾಸನ 48, ಹಾವೇರಿ 0, ಕಲಬುರಗಿ 5, ಕೊಡಗು 96, ಕೋಲಾರ 14, ಕೊಪ್ಪಳ 0, ಮಂಡ್ಯ 31, ಮೈಸೂರು 46, ರಾಯಚೂರು 3, ರಾಮನಗರ 2, ಶಿವಮೊಗ್ಗ 27, ತುಮಕೂರು 61, ಉಡುಪಿ 94, ಉತ್ತರ ಕನ್ನಡ 35, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 2 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 3 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಧಾರವಾಡ, ಮೈಸೂರು, ರಾಯಚೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಚುನಾವಣೆಗೂ ಮುನ್ನ ಬಿಜೆಪಿ ಸಂಸದ ಉಮೇಶ್ ಜಾಧವ್ ಗೆ ‘ಕೈ’ ಶಾಕ್

Spread the loveರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿದ್ದು, ಮೇ 7 ರಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ