ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 24) ಹೊಸದಾಗಿ 789 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,71,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,20,792 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,706 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 285 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,44,959 ಕ್ಕೆ ಏರಿಕೆಯಾಗಿದೆ. 12,44,959 ಸೋಂಕಿತರ ಪೈಕಿ 12,21,390 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,125 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,443 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 8, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 24, ಬೆಂಗಳೂರು ನಗರ 285, ಬೀದರ್ 2, ಚಾಮರಾಜನಗರ 8, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 23, ಚಿತ್ರದುರ್ಗ 5, ದಕ್ಷಿಣ ಕನ್ನಡ 108, ದಾವಣಗೆರೆ 6, ಧಾರವಾಡ 5, ಗದಗ 1, ಹಾಸನ 18, ಹಾವೇರಿ 1, ಕಲಬುರಗಿ 2, ಕೊಡಗು 37, ಕೋಲಾರ 8, ಕೊಪ್ಪಳ 0, ಮಂಡ್ಯ 19, ಮೈಸೂರು 71, ರಾಯಚೂರು 0, ರಾಮನಗರ 2, ಶಿವಮೊಗ್ಗ 13, ತುಮಕೂರು 29, ಉಡುಪಿ 69, ಉತ್ತರ ಕನ್ನಡ 34, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 5 ಹಾಗೂ ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.