Breaking News

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!

Spread the love

ಬೆಂಗಳೂರು: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ  ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು, ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್

Spread the love ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಯ  ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ