Breaking News

ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ

Spread the love

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಅತ್ತ ಉತ್ತರ ಕರ್ನಾಟಕದಲ್ಲೂ ಮಳೆ ಜಾಸ್ತಿಯಾಗಿದ್ದು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ವಿಜಯನಗರ, ಗದಗ, ಧಾರವಾಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕೊಪ್ಪಳದಲ್ಲಿ ಸಿಡಿಲು ಬಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಎರಡು ದಿನಗಳ ಹಿಂದೆ ನಡೆದಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆ ಹೆಚ್ಚಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯದಲ್ಲಿ ಇಂದು ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ.

ಸೆಪ್ಟೆಂಬರ್ 26ರವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಗುಜರಾತ್​ನಲ್ಲಿ ಇಂದಿನಿಂದ 3 ದಿನ ಅಂದರೆ ಸೆ. 25ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಇಂದು ವಿಪರೀತ ಮಳೆಯಾಗಲಿದೆ. ಒರಿಸ್ಸಾ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರದ ಒಳನಾಡು, ಛತ್ತೀಸ್​ಗಢ, ತಮಿಳುನಾಡು, ಗೋವಾ, ಅಂಡಮಾನ್ ನಿಕೋಬಾರ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಸಿಕ್ಕಿಂ, ಸೌರಾಷ್ಟ್ರ, ಕಚ್, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಪಂಜಾಬ್, ಹರಿಯಾಣ, ದೆಹಲಿ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಲಡಾಖ್​ನಲ್ಲಿ ಇಂದು ಮಳೆ ಹೆಚ್ಚಾಗಲಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ