Breaking News

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the love

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು,ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ