Breaking News

ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಶಂಕೆ: ನಾಗಲಕ್ಷ್ಮಿ ಚೌಧರಿ ಅನುಮಾನ

Spread the love

ಬಾಗಲಕೋಟೆ: ನಗರದ 50 ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿರಬಹುದು ಎಂಬ ಗಂಭೀರ ಅನುಮಾನವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆಯ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಈ ಆಸ್ಪತ್ರೆಯಲ್ಲಿ ಪ್ರತಿದಿನ ಸರಾಸರಿ 30 ಹೆರಿಗೆಗಳಾಗುತ್ತಿವೆ. ಆದರೆ, ದಾಖಲೆಗಳನ್ನು ಗಮನಿಸಿದಾಗ ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳ ಜನನ ಪ್ರಮಾಣವೇ ಹೆಚ್ಚಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಹೆಣ್ಣು ಮಗುವಿನ ಜನನ ಪ್ರಮಾಣ ಹೆಚ್ಚಿರಬೇಕು, ಆದರೆ ಇಲ್ಲಿ ಗಂಡು ಮಕ್ಕಳ ಸಂಖ್ಯೆ ಹೆಚ್ಚಿರುವುದು ಭ್ರೂಣ ಹತ್ಯೆ ನಡೆಯುತ್ತಿರಬಹುದು ಎಂಬ ಬಲವಾದ ಸಂಶಯಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ಜನನ ಪ್ರಮಾಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯಿಂದ ಸಂಪೂರ್ಣ ಮಾಹಿತಿ ಹಾಗೂ ಅಧಿಕೃತ ದಾಖಲೆಗಳನ್ನು ತರಿಸಿಕೊಂಡು ಪರಿಶೀಲಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಆಸ್ಪತ್ರೆಯ ನೈರ್ಮಲ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಇಡೀ ಆಸ್ಪತ್ರೆಯ ಸ್ವಚ್ಛತೆ ಕಾಪಾಡಲು ಕೇವಲ ಇಬ್ಬರೇ ನೌಕರರಿದ್ದಾರೆ. ಹೀಗಾಗಿ ತಕ್ಷಣವೇ ಆರೋಗ್ಯ ಇಲಾಖೆಯ ಆಯುಕ್ತರೊಂದಿಗೆ ಮಾತನಾಡಿ ಹೆಚ್ಚಿನ ‘ಡಿ’ ದರ್ಜೆ ಸಿಬ್ಬಂದಿಯನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದರು.

ತಮ್ಮ ಭೇಟಿಯ ವೇಳೆ ಆಸ್ಪತ್ರೆಗೆ ಬಂದಿದ್ದ ಸಾರ್ವಜನಿಕರು ಹಾಗೂ ಮಹಿಳೆಯರ ಕುಂದುಕೊರತೆಗಳನ್ನು ಆಲಿಸಿದ ನಾಗಲಕ್ಷ್ಮಿ ಚೌಧರಿ ಅವರು, ಸಂತ್ರಸ್ತ ಮಹಿಳೆಯರಿಗೆ ಸಾಂತ್ವನ ಹೇಳಿದರು. ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ