ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Laxmi News 24×7