ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧೀಯ ಸಸ್ಯಕಾಶಿ ಎಂದೆ ಖ್ಯಾತಿಯಾದ ಗದಗ ಜಿಲ್ಲೆ ಕಪ್ಪತ್ತಗುಡ್ಡ ಮತ್ತೆ ಬೆಂಕಿಗಾಹುತಿಯಾಗಿದೆ.
ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಕಪ್ಪತ್ತ ಮಲ್ಲಯ್ಯನ ದೇವಸ್ಥಾನದ ಬಳಿಯ ಕೆಪಿಟಿಸಿಎಲ್ ವಿಂಡ್ ಪ್ಯಾನ್ ಬಳಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಅಪಾರ ಪ್ರಮಾಣದ ಔಷಧೀಯ ಸಸ್ಯಗಳು ಸಂಪತ್ತು ಸೇರಿದಂತೆ ಪ್ರಾಣಿ ಪಕ್ಷಿಗಳು ಬೆಂಕಿಗೆ ಆಹುತಿಯಾಗಿದೆ.
ಕಪ್ಪತ್ತಗುಡ್ಡದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆಗೆ ಬೆಂಕಿ ಕಾಣಿಸಿಕೊಂಡಿತ್ತು. ಇದು ವಿಂಡ್ ಫ್ಯಾನ್ ಶಾರ್ಟ್ ಸರ್ಕ್ಯೂಟ್‍ನಿಂದ ಆಗಿದೆಯಾ? ಅಥವಾ ಕಿಡಿಗೇಡಿಗಳ ಕೃತ್ಯನಾ? ಎಂಬುದು ತಿಳಿದು ಬಂದಿಲ್ಲ. ಬೇಸಿಗೆ ಸಂದರ್ಭದಲ್ಲಿ ಪ್ರತಿ ವರ್ಷವೂ ಈ ಭಾಗದಲ್ಲಿ ಬೆಂಕಿ ಹತ್ತಿಕೊಳ್ಳುತ್ತಿದ್ದು, ಇದುವರೆಗೂ ಬೆಂಕಿ ಹೇಗೆ ಹೊತ್ತಿಕೊಳ್ಳುತ್ತದೆ ಎನ್ನುವ ನಿಖರವಾದ ಕಾರಣ ತಿಳಿದು ಬರುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದರೂ ಕೆಲಕಾಲ ಬೆಂಕಿ ಹತೋಟಿಗೆ ತರಲು ಹರಸಾಹಸ ಪಡಬೇಕಾಯಿತು.