ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ
ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು.
ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ವಿಶ್ವದರ್ಜೆಯ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಉದ್ದೇಶವಾಗಿದೆ. ಬಂದರಿನ ಆಸುಪಾಸಿನ ಯುವಕರಿಗೆ ಉದ್ಯೋಗ ಒದಗಿಸುತ್ತದೆ ಹಾಗೂ ಆಸುಪಾಸಿನ ಪ್ರದೇಶಗಳನ್ನು ತ್ವರಿತಗತಿಯಲ್ಲಿ ಅಭಿವೃದ್ಧಿ ಹೊಂದುವಲ್ಲಿ ಬಂದರುಗಳು ಪ್ರಮುಖ ಪಾತ್ರವಹಿಸುವುದೇ ಈ ಯೋಜನೆಯ ವಿಶೇಷತೆ. ಈ ಯೋಜನೆಯಿಂದ ಸಾಂಪ್ರದಾಯಿಕ ಮತ್ತು ಯಾಂತ್ರಿಕ ಮೀನುಗಾರಿಕೆಗೆ ತೊಂದರೆಯಾಗದಂತೆ ಹಾಗೂ ರವೀಂದ್ರನಾಥ್ ಟ್ಯಾಗೂರ್ ಕಡಲತೀರಕ್ಕೆ ತೊಂದರೆಯಾಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು. ಮೀನುಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೀನುಗಾರಿಕಾ ಸಚಿವರಾದ ಕೋಟ ಶ್ರೀ ಶ್ರೀನಿವಾಸ ಪೂಜಾರಿ ಅವರು, ಶಾಸಕಿ ಶ್ರೀಮತಿ ರೂಪಾಲಿ ನಾಯಕ್, ಉತ್ತರ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ರಾದ ಶ್ರೀ ಕೆ.ಜಿ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.