Breaking News
Home / new delhi / ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್………..

ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್………..

Spread the love

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ.

ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಭಾನುವಾರ ಮಧ್ಯಾಹ್ನ ಬಳಿಕ ಇದ್ದ ಎಲ್ಲ ಸಭೆಗಳನ್ನು ರದ್ದು ಮಾಡಿ ಕ್ವಾರಂಟೈನ್ ನಲ್ಲಿದ್ದಾರೆ. ದೆಹಲಿಯಲ್ಲಿ ಈವರೆಗೂ 28,936 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 812 ಮಂದಿ ಸಾವನ್ನಪ್ಪಿದ್ದಾರೆ. 11,000 ಮಂದಿ ಗುಣ ಮುಖ ಹೊಂದಿದ್ದಾರೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ