Breaking News

ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು; ಬಿಸಿಲಿಗೆ ಕುಸಿದು ಬಿದ್ದಿರುವ ಶಂಕೆ

Spread the love

ರಾಯಚೂರು: ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಹುಸೇನಪ್ಪ ಮಡಿವಾಳ್ (45) ಮೃತ ವ್ಯಕ್ತಿ. ಬಿಸಿಲಿನ ತಾಪಮಾನಕ್ಕೆ ದಣಿದು, ವಿಶ್ರಾಂತಿ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಾಪಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಹುಸೇನಪ್ಪ ಕೆಲಸ ಮುಗಿಸಿ ಮಧ್ಯಾಹ್ನ ಮನೆಗೆ ಬರುವಾಗ ದಾರಿಯಲ್ಲಿ ಕುಸಿದು ಬಿದ್ದಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತೆಗೆ ಸಾಗಿಸುವ ಮಾರ್ಗ ಮಧ್ಯೆ ಹುಸೇನಪ್ಪ ಮೃತಪಟ್ಟಿದ್ದಾರೆ.

ಬಿಸಿಲಿನ ತಾಪಕ್ಕೆ ಲೋ ಬಿಪಿಯಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ