Breaking News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

Spread the love

ತಿರುವನಂತಪುರಂ:ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕೇರಳದ  ತ್ರಿಶ್ಯೂರು ಜಿಲ್ಲೆಯಲ್ಲಿ ನಡೆದಿದೆ.

ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿ.ಎಸ್.ಎಂ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಸೆಂಟರ್‌ನ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಸುಮಾರಿಗೆ ಬಂದ ತಮಿಳುನಾಡು ನೋಂದಣಿಯ ಕಾರು (TN 59 DW 8299) ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಸಿಬ್ಬಂದಿ ಕಾರಿನ ಬಿಡಿಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದ ಎಂಟೂ ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಕೈಪಮಂಗಲಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


Spread the love

About Laxminews 24x7

Check Also

ರಿಯಲ್ ಎಸ್ಟೇಟ್ ಗುಂಗಿನಿಂದ ಹೊರಬಂದು ಪ್ರಜಾಸೇವೆ ನೆನಪಿಸಿಕೊಂಡ ಸಿಎಂಗೆ ಧನ್ಯವಾದ – ನಿಖಿಲ್‌ ಲೇವಡಿ

Spread the loveಬೆಂಗಳೂರು: ರಿಯಲ್ ಎಸ್ಟೇಟ್ ಆಡಳಿತದ ಗುಂಗಿನಿಂದ ಹೊರಬಂದು, ಕೊನೆಗೂ “ಪ್ರಜಾಸೇವೆ”  ನೆನಪಿಸಿಕೊಂಡ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ